HomeKarnatakaಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆ: ಸಚಿವ ಬೈರತಿ ಸುರೇಶ್

ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆ: ಸಚಿವ ಬೈರತಿ ಸುರೇಶ್

ಕೋಲಾರ: ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆಯಾಗುತ್ತದೆ. ಹಾಗಾಗಿ ಕುರುಬ ಸಮುದಾಯದವರು ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಲಾರದ ಹಾಲಿಸ್ಟರ್ ಭವನದಲ್ಲಿ ಆಯೋಜಿಸಿದ್ದ ಕುರುಬ ಸಮುದಾಯದವರ ಸಭೆಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ತೊಂದರೆಯಾಗುವುದರಿಂದ ಅವರ ಕೈ ಬಲಪಡಿಸಬೇಕು. ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ. ಗೌತಮ್ ಅವರನ್ನು ಗೆಲ್ಲಿಸಲು ಸಹಕಾರ ನೀಡಬೇಕು ಎಂದು ಕೋರಿದ್ದಾರೆ.

ಲೋಕಸಭೆ ಚುನಾವಣೆಯ ನಂತರ ಸಿದ್ದರಾಮಯ್ಯ ಅವರನ್ನು ಕಿತ್ತೆಸೆಯುವುದಾಗಿ ವಿಪಕ್ಷ ನಾಯಕರು ಹೇಳುತ್ತಿದ್ದಾರೆ. ಅದಕ್ಕೆಲ್ಲ ಅವಕಾಶ ಮಾಡಿಕೊಡಬೇಡಿ, ಸಿದ್ದರಾಮಯ್ಯನವರ ಕೈ ಬಲಪಡಿಸಿ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular