HomeKarnatakaBREAKING: ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಮಾಜಿ ಸಚಿವ ಬೈರತಿ ಬಸವರಾಜ್ ಕಾರ್ ಪಲ್ಟಿ: ಅಪಘಾತದಲ್ಲಿ ಇಬ್ಬರಿಗೆ...

BREAKING: ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಮಾಜಿ ಸಚಿವ ಬೈರತಿ ಬಸವರಾಜ್ ಕಾರ್ ಪಲ್ಟಿ: ಅಪಘಾತದಲ್ಲಿ ಇಬ್ಬರಿಗೆ ಗಾಯ

ಯಾದಗಿರಿ: ಬಿಜೆಪಿ ಮುಖಂಡ, ಮಾಜಿ ಸಚಿವ ಭೈರತಿ ಬಸವರಾಜ್ ಗೆ ಸೇರಿದ ಕಾರ್ ಪಲ್ಟಿಯಾಗಿದೆ. ಅಪಘಾತವಾದ ಕಾರ್ ನಲ್ಲಿ ಬೈರತಿ ಬಸವರಾಜ್ ಪ್ರಯಾಣಿಸುತ್ತಿರಲಿಲ್ಲ. ಅವರು ಬೇರೆ ಕಾರ್ ನಲ್ಲಿ ತೆರಳುತ್ತಿದ್ದರು.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಸಮೀಪ ಘಟನೆ ನಡೆದಿದೆ. ಅಪಘಾತದಲ್ಲಿ ಬೈರತಿ ಬಸವರಾಜ್ ಅವರ ಕಾರ್ ಚಾಲಕ ಮತ್ತು ಗನ್ ಮ್ಯಾನ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹುಣಸಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಸುರಪುರ ಅಭ್ಯರ್ಥಿ ರಾಜೂಗೌಡ ಪರ ಮತಯಾಚನೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಹುಣಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular