HomeKarnatakaBIG NEWS: ಸಚಿವ ಬೈರತಿ ಸುರೇಶ್ ಹೇಳಿಕೆಗೆ ಶೋಭಾ ಕರಂದ್ಲಾಜೆ ತಿರುಗೇಟು: ಸಿಎಂ ಮಗನ ಸಾವಿಗೆ...

BIG NEWS: ಸಚಿವ ಬೈರತಿ ಸುರೇಶ್ ಹೇಳಿಕೆಗೆ ಶೋಭಾ ಕರಂದ್ಲಾಜೆ ತಿರುಗೇಟು: ಸಿಎಂ ಮಗನ ಸಾವಿಗೆ ಬೈರತಿ ಕಾರಣ ಎಂಬ ಆರೋಪವಿದೆ ಎಂದ ಕೇಂದ್ರ ಸಚಿವೆ

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಚಿವ ಬೈರತಿ ಸುರೇಶ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪತ್ನಿ ಸಾವಿನ ಹಿಂದೆ ಶೋಭಾ ಕರಂದ್ಲಾಜೆ ಕೈವಾಡವಿರುವ ಅನುಮಾನವಿದೆ ಎಂದು ಸಚಿವ ಬೈರತಿ ಸುರೇಶ್ ಆರೋಪಿಸಿದ್ದರು. ಇದೀಗ ಬೈರತಿ ಸುರೇಶ್ ಹೇಳಿಕೆಗೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಶೋಭಾ ಕರಂದ್ಲಾಜೆ, ಬೈರತಿ ಸುರೇಶ್ ಭಯದಿಂದ ಇಂತಹ ಆರೋಪ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಪುತ್ರ ರಾಕೇಶ್ ಸಾವಿಗೆ ಬೈರತಿ ಸುರೇಶ್ ಕಾರಣ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ನಾನು ಈ ಬಗ್ಗೆ ಹೇಳಬೇಕಾ? ಬೈರತಿ ಸುರೇಶ್ ಅವರೇ ನಾಲಿಗೆ ಬಿಗಿ ಹಿಡಿದು ಮಾತನಾಡಿ. ಕೆಳಮಟ್ಟದ ರಾಜಕಾರಣ ಮಾಡುವುದನ್ನು ಬಿಡಿ ಎಂದು ಕಿಡಿಕಾರಿದ್ದಾರೆ.

ಕೌರವನನ್ನು ಶಕುನಿ ಮುಗಿಸಿದ ಹಾಗೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಗಿಸಲೆಂದೇ ಬೈರತಿ ಸುರೇಶ್ ಇದ್ದಾರೆ. ನಾನು ಓಡಿ ಹೋಗುವ ರಾಜಕಾರಣಿಯಲ್ಲ. ನಿಮ್ಮನ್ನು ಹೆಬ್ಬಾಳದಿಂದ ಓಡಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular