BREAKING : ಕಲಘಟಗಿ ಮಾಜಿ ಶಾಸಕ ‘ಸಿಎಂ ನಿಂಬಣ್ಣವರ್’ ಇನ್ನಿಲ್ಲ |C M Nimbannavar No More

ಹುಬ್ಬಳ್ಳಿ : ಕಲಘಟಗಿ ಮಾಜಿ ಶಾಸಕ ಸಿಎಂ ನಿಂಬಣ್ಣವರ್ (76) ಇಂದು ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಸಿಎಂ ಸಿಂಬಣ್ಣವರ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಅಪೋಲೋ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 11:10 ಕ್ಕೆ ಕೊನೆಯುಸಿರೆಳೆದಿದ್ದು, ಇಂದು ಕಲಘಟಗಿಗೆ ಪಾರ್ಥಿವ ಶರೀರ ರವಾನೆಯಾಗುತ್ತಿದೆ ಎಂದು ಮೂಲಗಳು ತಿಳಿಸಿದೆ. ನಾಳೆ ಸಂಜೆ 3 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ.  1947ರಲ್ಲಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗೇದೇವರಕೊಪ್ಪ ಗ್ರಾಮದ ರೈತ ಕುಟುಂಬದಲ್ಲಿ ಜನಿಸಿದ್ದ ಇವರು 1995 ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read