BREAKING NEWS: ನಾವೇ ಕಟ್ಟಿದ ಮನೆಯಲ್ಲಿ ಕೆಲವೊಮ್ಮೆ ನಾವೇ ವಾಸ ಮಾಡಲು ಆಗಲ್ಲ; ಕಾಂಗ್ರೆಸ್ ಗೆ ಮರು ಸೇರ್ಪಡೆಯಾದ ಕಾರಣ ಬಿಚ್ಚಿಟ್ಟ ಸಿ.ಪಿ.ಯೋಗೇಶ್ವರ್

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಯಾಗಿದ್ದಾರೆ. ಈ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

ಕಾಂಗ್ರೆಸ್ ಸೇರ್ಪಡೆ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಪಿ.ಯೋಗೇಶ್ವರ್, ನಾನು ತುಂಬಾ ವರ್ಷಗಳಿಂದ ಕಾಂಗ್ರೆಸ್ ನಲ್ಲಿಯೇ ಇದ್ದವನು. ಬಳಿಕ ಹೋದೆ, ಈಗ ಮತ್ತೆ ಬಂದಿದ್ದೇನೆ ಎಂದರು.

ಕೆಲವು ಸಂದರ್ಭಗಳಲ್ಲಿ ನಾವು ಕಟ್ಟಿದ ಮನೆಯಲ್ಲಿ ನಮಗೇ ವಾಸ ಮಾಡಲು ಆಗಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಆದಮೇಲೆ ವಾತಾವರಣ ನನ್ನ ಪರ ಇರಲಿಲ್ಲ. ನನ್ನ ರಾಜಕೀಯ ಬೆಳವಣಿಗೆಗೆ ಪೂರಕವಾಗಿ ಇರಲಿಲ್ಲ. ಮುಂದಿನ ದಿನಗಳಲ್ಲಿ ಒಳ್ಳೆಯದಾಗಬೇಕು ಎಂಬ ಕಾರಣಕ್ಕೆ ಮತ್ತೆ ಕಾಂಗ್ರೆಸ್ ಗೆ ಬಂದಿದ್ದೇನೆ. ನಾನು ಯಾವುದೇ ಷರತ್ತುಗಳನ್ನು ಹಾಕದೇ ಪಕ್ಷಕ್ಕೆ ಬಂದಿದ್ದೇನೆ ಎಂದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ. ಆ ಅಭಿವೃದ್ಧಿಯ ಭಾಗವಾಗಿ ನಾನೂ ಇರಬೇಕು ಎಂಬ ಆಸೆಯಿಂದ ಕಾಂಗ್ರೆಸ್ ಗೆ ಬಂದಿದ್ದೆನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read