HomeKarnatakaBREAKING NEWS: ಡಿಸಿಎಂ ಡಿ.ಕೆ. ಶಿವಕುಮಾರ್ ಮನೆಯಲ್ಲಿ ಸಿ.ಪಿ.ಯೋಗೇಶ್ವರ್ ಪ್ರತ್ಯಕ್ಷ: ಒಂದೇ ಕಾರಿನಲ್ಲಿ ಸಿಎಂ...

BREAKING NEWS: ಡಿಸಿಎಂ ಡಿ.ಕೆ. ಶಿವಕುಮಾರ್ ಮನೆಯಲ್ಲಿ ಸಿ.ಪಿ.ಯೋಗೇಶ್ವರ್ ಪ್ರತ್ಯಕ್ಷ: ಒಂದೇ ಕಾರಿನಲ್ಲಿ ಸಿಎಂ ನಿವಾಸಕ್ಕೆ ತೆರಳಿದ ನಾಯಕರು; ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ. ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದ ಸಿ.ಪಿ.ಯೋಗೇಶ್ವರ್ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ.

ಈ ಮೂಲಕ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ನಾಟಕ ಪ್ರಹಸನಕ್ಕೆ ಬಹುತೇಕ ತೆರೆಬಿದ್ದಂತಾಗಿದೆ. ಸಿ.ಪಿ.ಯೋಗೇಶ್ವರ್ ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ. ಕೆಲ ಕಾಲ ಚರ್ಚೆ ಬಳಿಕ ಡಿ.ಕೆ.ಶಿವಕುಮಾರ್ ಹಾಗೂ ಯೋಗೇಶ್ವರ್ ಒಂದೇ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ್ದಾರೆ.

ಈ ಹಿನ್ನೆಲೆಯಲ್ಲಿ ಕೆಲವೇ ಕ್ಷಣಗಳಲ್ಲಿ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಬಿಜೆಪಿ-ಜೆಡಿಎಸ್ ನಾಯಕರಿಗೆ ಟಕ್ಕರ್ ಕೊಡಲು ಸಜ್ಜಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular