HomeKarnatakaBREAKING NEWS: ಕೆಪಿಸಿಸಿ ಕಚೇರಿಗೆ ಆಗಮಿಸಿದ ಸಿ.ಪಿ.ಯೋಗೇಶ್ವರ್: ಕೆಲವೇ ಕ್ಷಣಗಳಲ್ಲಿ ಸುದ್ದಿಗೋಷ್ಠಿ

BREAKING NEWS: ಕೆಪಿಸಿಸಿ ಕಚೇರಿಗೆ ಆಗಮಿಸಿದ ಸಿ.ಪಿ.ಯೋಗೇಶ್ವರ್: ಕೆಲವೇ ಕ್ಷಣಗಳಲ್ಲಿ ಸುದ್ದಿಗೋಷ್ಠಿ

ಬೆಂಗಳೂರು: ಬಿಜೆಪಿ-ಜೆಡಿಎಸ್ ನಾಯಕರಿಗೆ ಸೆಡ್ಡು ಹೊಡೆದ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಕೆಲವೇ ಹೊತ್ತಲ್ಲ ಸಿ.ಪಿ.ಯೋಗೇಶ್ವರ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ ರಾಜಕೀಯ ಚದುರಂಗದಾಟವಾಗಿ ಮಾರ್ಪಟ್ಟಿದೆ. ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿಎ ಟಿಕೆಟ್ ಸಿಗದ ಬೆನ್ನಲ್ಲೇ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದು, ಇಂದು ಬೆಳಿಗ್ಗೆ 11:30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಇದೇ ವೇಳೆ ಸಿ.ಪಿ.ಯೋಗೇಶ್ವರ್ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಹಿಂದೆ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಬಳಿಕ ಬಿಜೆಪಿಗೆ ಸೇರ್ಪಡೆಯಾಗಿದ್ದ ಯೋಗೇಶ್ವರ್ ಇದೀಗ ಮತ್ತೆ ಕಾಂಗ್ರೆಸ್ ಸೇರುವ ಮೂಲಕ ಘರ್ ವಾಪ್ಸಿಯಾಗುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular