HomeKarnatakaBIG NEWS: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭಾವ ನಾಪತ್ತೆ ಪ್ರಕರಣ; ರಾಮಾಪುರದಲ್ಲಿ ಕಾರು ಪತ್ತೆ

BIG NEWS: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭಾವ ನಾಪತ್ತೆ ಪ್ರಕರಣ; ರಾಮಾಪುರದಲ್ಲಿ ಕಾರು ಪತ್ತೆ

ರಾಮನಗರ: ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಅವರ ಭಾವ ಮಹದೇವಯ್ಯ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ತೆಗಾಗಿ ಪೊಲೀಸರ ವಿಶೇಷ ತಂಡ ರಚನೆ ಮಾಡಲಾಗಿದೆ. ಈ ನಡುವೆ ಮಹದೇವಯ್ಯ ಅವರ ಕಾರು ರಾಮಾಪುರದಲ್ಲಿ ಪತ್ತೆಯಾಗಿದೆ.

ಕಳೆದ ಮೂರು ದಿನಗಳಿಂದ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ನಾಪತ್ತೆಯಾಗಿದ್ದು, ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದೀಗ ಅವರ ಕಾರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಗ್ರಾಮದ ಬಳಿ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರಿನ ಟೈ ಲ್ಯಾಂಪ್ ಬಳಿ ರಕ್ತದ ಕಲೆ ಇದ್ದು ಸ್ಥಳಕ್ಕೆ ಫಾರೆನ್ಸಿಕ್ ಹಾಗೂ ಪೊಲೀಸ್ ತನಿಖಾ ತಂಡ ದೌಡಾಯಿಸಿ ಪರಿಶೀಲನೆ ನಡೆಸಿದೆ. ರಕ್ತದ ಕಲೆ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಿಂದ ಮಹದೇವಯ್ಯ ಅವರು ಡಿಸೆಂಬರ್ 2ರಂದು ಏಕಾಏಕಿ ನಾಪತ್ತೆಯಾಗಿದ್ದರು. ಮಹದೇವಯ್ಯ ಉದ್ಯಮಿ ಹಾಗೂ ಮೆಗಾಸಿಟಿ ನಿರ್ದೇಶಕರೂ ಆಗಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular