HomeKarnatakaBIG NEWS: ಆಡಳಿತ ದೃಷ್ಟಿಯಿಂದ ರಾಮನಗರ ಜಿಲ್ಲೆ ಇರುವುದೇ ಸೂಕ್ತ ಎಂದ ಸಿ.ಪಿ.ಯೋಗೇಶ್ವರ್

BIG NEWS: ಆಡಳಿತ ದೃಷ್ಟಿಯಿಂದ ರಾಮನಗರ ಜಿಲ್ಲೆ ಇರುವುದೇ ಸೂಕ್ತ ಎಂದ ಸಿ.ಪಿ.ಯೋಗೇಶ್ವರ್

ರಾಮನಗರ: ಇಡೀ ರಾಮನಗರ ಜಿಲ್ಲೆ ಬೆಂಗಳೂರಿಗೆ ಸೇರಲಿದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಿಡಿಕಾರಿದ್ದಾರೆ.

ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಆಡಳಿತ ದೃಷ್ಟಿಯಿಂದ ರಾಮನಗರ ಜಿಲ್ಲೆ ಇರುವುದೇ ಸೂಕ್ತ. ಸರ್ಕಾರಿ ಕೆಲಸಕ್ಕೆ ಬೆಂಗಳೂರಿಗೆ ಬಂದು ಹೋಗುವುದು ದೊಡ್ಡ ಸವಾಲು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ನಗರದಲ್ಲಿ ಒಕ್ಕಲಿಗ ಸಮುದಾಯದವರು ಹೆಚ್ಚಿದ್ದಾರೆ. ಆಡಳಿತ ಕೈತಪ್ಪುತ್ತದೆ ಎಂಬ ಆತಂಕ ಡಿಸಿಎಂ ಅವರಿಗೆ ಇರಬಹುದು. ಡಿ.ಕೆ.ಶಿವಕುಮಾರ್ ಅವರಿಗೆ ಏನು ತೊಂದರೆ ಇದೆ ಅಂತಾ ಗೊತ್ತಿಲ್ಲ. ಅವರು ಆಡುವ ಪ್ರತಿ ಮಾತು ವಿವಾದವಾಗುತ್ತಿದೆ. ಮುಂದೆ ರಾಮನಗರ ಜಿಲ್ಲೆಯ ಜನರು ಪ್ರತಿಭಟನೆ ಮಾಡಬಹುದು ಎಂದು ಎಚ್ಚರಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular