MLA ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಮಾಜಿ ಶಾಸಕನಾಗಬಹುದು, ಇನ್ನೇನು ಆಗಲು ಸಾಧ್ಯವಿಲ್ಲ; ಎಸ್.ಟಿ.ಸೋಮಶೇಖರ್ ಗೆ ಸಿ.ಪಿ.ಯೋಗೇಶ್ವರ್ ಟಾಂಗ್

ರಾಮನಗರ: ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರವಾಗಿ ಶಾಸಕ ಎಸ್.ಟಿ.ಸೋಮಶೇಖರ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ವಿಚಾರವಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಿಡಿ ಕಾರಿದ್ದು, ಸೋಮಶೇಖರ್ ಬಿಜೆಪಿಯಲ್ಲಿ ದೊಡ್ಡ ಫಲಾನುಭವಿ. ಈಗ ಅಧಿಕಾರವಿಲ್ಲ ಎಂಬ ಕಾರಣಕ್ಕೆ ಪಕ್ಷವನ್ನು ಟೀಕಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಪಿ.ಯೋಗೇಶ್ವರ್, ಎಸ್.ಟಿ.ಸೋಮಶೇಖರ್ ಬಿಜೆಪಿಗೆ ಬಂದ ಮೇಲೆ ಬಿಡಿಎ ಅಧ್ಯಕ್ಷರಾದರು. ಮಂತ್ರಿಯಾಗಿ ಪ್ರಬಲ ಖಾತೆ ಪಡೆದರು. ಅಧಿಕಾರ ಅನುಭವಿಸಿದರು. ಇಂದು ಅಧಿಕಾರವಿಲ್ಲ ಎಂದು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಜೊತೆ ಸಂಪರ್ಕದಲ್ಲಿದ್ದು ಈಗ ನಮ್ಮ ಪಕ್ಷವನ್ನೇ ಟೀಕಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮೈತ್ರಿ ವಿಚಾರವಾಗಿಯೂ ಮಾತನಾಡುತ್ತಿದ್ದಾರೆ. ಬಹುಶಃ ಎಂಎಲ್ ಎ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಮಾಜಿ ಶಾಸಕ ಆಗಬಹುದು ಅಷ್ಟೇ ಇನ್ನೇನು ಅಗಲು ಸಾಧ್ಯವಿಲ್ಲಎಂದು ವ್ಯಂಗ್ಯವಾಡಿದರು.

ಒಂದು ವೇಳೆ ಸೋಮಶೇಖರ್ ಹೊರ ಹೋಗುವ ತೀರ್ಮಾನ ಮಾಡಿದರೆ ನಮ್ಮ ವಿರೋಧವಿಲ್ಲ ಸ್ವಾಗತಿಸುತ್ತೇವೆ ಎಂದು ಟಾಂಗ್ ನೀಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read