HomeKarnatakaBREAKING NEWS: ಸಿಐಡಿ ವಿಚಾರಣೆಗೆ ಹಾಜರಾದ ಎಂಎಲ್ ಸಿ ಸಿ.ಟಿ.ರವಿ

BREAKING NEWS: ಸಿಐಡಿ ವಿಚಾರಣೆಗೆ ಹಾಜರಾದ ಎಂಎಲ್ ಸಿ ಸಿ.ಟಿ.ರವಿ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ.

ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸಿ.ಟಿ.ರವಿ ಅವರಿಗೆ ನೋಟಿಸ್ ನೀಡಿದ್ದರು. ಈ ಹಿನ್ನಲೆಯಲ್ಲಿ ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಸಿ.ಟಿ.ರವಿ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ವಿಧಾನಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ. ಇದೇ ಪ್ರಕರಣದಲ್ಲಿ ಸಿ.ಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಸಿ.ಟಿ.ರವಿ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದ್ದು, ಈ ಹಿನ್ನೆಲೆಯಲ್ಲಿ ಸಿ.ಟಿ.ರವಿ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular