HomeLatest NewsBIG NEWS: ಪಕ್ಷದ್ರೋಹಿಗಳಿಗೆ ತಕ್ಕ ಪಾಠವಾಗಿದೆ: ಶಾಸಕ ಶಿವರಾಮ್ ಹೆಬ್ಬಾರ್, ಸೋಮಶೇಖರ್ ಉಚ್ಛಾಟನೆಗೆ ಸಿ.ಟಿ.ರವಿ ಪ್ರತಿಕ್ರಿಯೆ

BIG NEWS: ಪಕ್ಷದ್ರೋಹಿಗಳಿಗೆ ತಕ್ಕ ಪಾಠವಾಗಿದೆ: ಶಾಸಕ ಶಿವರಾಮ್ ಹೆಬ್ಬಾರ್, ಸೋಮಶೇಖರ್ ಉಚ್ಛಾಟನೆಗೆ ಸಿ.ಟಿ.ರವಿ ಪ್ರತಿಕ್ರಿಯೆ

ಬೆಂಗಳೂರು: ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಎಸ್.ಟಿ.ಸೋಮಶೇಖರ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿರುವ ಕ್ರಮಕ್ಕೆ ಪ್ರತಿಕ್ರಿಯಿಸಿರುವ ಬಿಇಜೆಪಿ ಪರಿಷತ್ ಸದಸ್ಯ ಸಿ.ಟಿ.ರವಿ, ಪಕ್ಷದ್ರೋಹಿಗಳಿಗೆ ತಕ್ಕ ಪಾಠವಾಗಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯಬೇಧ, ಭಿನ್ನಮತ ಸಾಮಾನ್ಯ. ಆದರೆ ಪಕ್ಷಕ್ಕೆ ದ್ರೋಹ ಬಗೆಯುವುದು ಸರಿಯಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಿನ್ನಮತ ಸಹಿಸಿಕೊಳ್ಳಬಹುದು. ಪಕ್ಷದ್ರೋಹವನ್ನು ಸಹಿಸಲ್ಲ. ಪ್ಖ್ಶದ್ರೋಹ ಯಾರೇ ಮಾಡಿದರೂ ತಪ್ಪು. ಪಕ್ಷದ್ರೋಹ ಮಾಡಿದವರಿಗೆ ಇದು ಒಂದು ಸಂದೇಶ, ಅಂತವರಿಗೆ ತಕ್ಕ ಪಾಠವಾಗಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular