HomeLive Newsಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? ಫಲಾನುಭವಿಗಳನ್ನು ಕಡಿಮೆ ಮಾಡುವ ಪ್ಲಾನ್: ಸಿ.ಟಿ.ರವಿ...

ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? ಫಲಾನುಭವಿಗಳನ್ನು ಕಡಿಮೆ ಮಾಡುವ ಪ್ಲಾನ್: ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ಗೃಹಲಕ್ಷ್ಮೀ ಯೋಜೆನೆಯಲ್ಲಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಯಿಂದ ಹೊರಗಿಡುವ ಪ್ರಕ್ರಿಯೆ ಆರಂಭವಾಗಿದ್ದು, ಈ ಬಗ್ಗೆ ವಿಪಕ್ಷ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಅಂದು ಕಾಕಾ ಪಾಟೀಲ್ ನಿಂಗೂ ಫ್ರೀ, ಜಮೀರ್ ಅಹ್ಮದ್ ನಿಂಗೂ ಫ್ರೀ, ಮಹದೇವಪ್ಪ ನಿಂಗೂ ಫ್ರೀ ಎಂದು ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯನವರು ಘೋಷಿಸಿದ್ದರು. ಈಗ ಏನಾಯ್ತು? 10 ಕೆಜಿ ಅಕ್ಕಿ ಕೊಟ್ಟಿದ್ದೀರಾ? ಮೋದಿಯವರು 5 ಕೆಜಿ ಅಕ್ಕಿ ಕೊಡದೇ ಇದ್ದರೆ, ನಿಮ್ಮನ್ನೇ ನಂಬಿದ್ದರೆ ಜನರು ಖಾಲಿ ಹೊಟ್ಟೆಯಲ್ಲಿ ನೀರು ಕುಡಿದು ಮಲಗಬೇಕಿತ್ತು ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಮ್ಮ ಕಂಡಿಷನ್ ಯಾಕೆ, ಖಜಾನೆ ಖಾಲಿಯಾಗಿದೆ ಎಂಬುದು ಜನರಿಗೆ ಗೊತ್ತಿದೆ ಎಂದು ತಿಳಿಸಿದರು. ಫಲಾನುಭವಿ ಜನರನ್ನು ಕಡಿಮೆ ಮಾಡಲು ಕಂಡಿಷನ್ ಹಾಕುತ್ತೀರಿ. ನಿಮ್ಮ ಹಳೆ ಭಾಷಣವನ್ನು ಜನರು ಕೇಳಿಸಿಕೊಳ್ಳುತ್ತಾರೆ ಎಂದರು.

ಇದಕ್ಕೆ ಸೂಕ್ತ ಸಮಯದಲ್ಲಿ ಜನರು ಉತ್ತರ ಕೊಡುತ್ತಾರೆ. ನಮಗೂ ಗ್ಯಾರಂಟಿ ಯೋಜನೆಗಳಿಗೂ ಸಂಬಂಧ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಅವರು ಹೇಳಿದರೆ, ನಾವು ಪ್ರಶ್ನೆ ಮಾಡುವುದಿಲ್ಲ ಎಂದು ಸವಾಲು ಹಾಕಿದರು.

ಗೃಹಲಕ್ಷ್ಮಿ ಕೊಡಬೇಕಾಗುತ್ತದೆ ಎಂದು ಹೊಸ ಬಿಪಿಎಲ್ ಕಾರ್ಡ್ ಕೊಡುವುದನ್ನೂ ನಿಲ್ಲಿಸಿದ್ದಾರೆ. ಇದರಿಂದಾಗಿ ಅರ್ಹ ಫಲಾನುಭವಿಗಳು ಬಿಪಿಎಲ್ ಕಾರ್ಡ್‌ನಿಂದಲೂ ವಂಚಿತರಾಗಿದ್ದಾರೆ. ಇದು ಸರಿಯಲ್ಲ ಎಂದು ಗುಡುಗಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular