HomeKarnatakaಸಿ.ಟಿ.ರವಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್: ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ

ಸಿ.ಟಿ.ರವಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್: ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ

ಬೆಂಗಳೂರು: ನೀಟ್ ಪ್ರತಿಭಟನೆ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿದೆ.

ಎಂಎಲ್‌ಸಿ ಸಿ.ಟಿ. ರವಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ತುರ್ತು ವಿಚಾರಣೆಗೆ ಕೋರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಜುಲೈ 31ಕ್ಕೆ ವಿಚಾರಣೆ ಮುಂದೂಡಿದ್ದು, ಅಲ್ಲಿಯವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ.

ಸಿ.ಟಿ.ರವಿ ತಮ್ಮ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಅಡಿಯಲ್ಲಿ ದಾಖಲಾದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡುವಂತೆ ಮನವಿ ಮಾಡಿದ್ದಾರೆ. 3ನೇ ವ್ಯಕ್ತಿ ಈ ಕೇಸ್ ನಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಎಂದು ಸಿಟಿ ರವಿ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ. ಇನ್ನು ನೋಟಿಸ್ ತಲುಪಿಲು ಹೋದ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ. ಕಾಂಗರೂ ಕೋರ್ಟ್ ನಂತೆ ವರ್ತಿಸಿದ್ದಾರೆಂದು ಎಸ್ ಪಿಪಿ ಬಿ.ಎನ್. ಜಗದೀಶ್ ಎಂದು ಪ್ರತಿವಾದ ಮಂಡಿಸಿದರು. ಈ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್, ವಿಚಾರಣೆಯನ್ನು ಜುಲೈ 31ಕ್ಕೆ ಮುಂದೂಡಿದೆ. ಅಲ್ಲದೇ ಅಲ್ಲಿಯವರೆಗೂ ಸಿಟಿ ರವಿ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಪೊಲೀಸರಿಗೆ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತ್ತೊಂದೆಡೆ ಸಿ.ಟಿ.ರವಿ ವಿರುದ್ಧದ ಎಫ್ಐಆರ್ ಪ್ರಕರಣ ಚಿಕ್ಕಮಗಳೂರಿನಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ.

ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ನಡೆದ ಪ್ರತಿಭಟನೆಗಳ ಕುರಿತು ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ್ದ ಸಿ.ಟಿ ರವಿ, ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ? ಮುಲ್ಲಾಗಳ ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ. ಅವರು ಬಂದು ನೀಟ್ ವಿರುದ್ಧ ಹೋರಾಟ ಮಾಡುತ್ತಿದ್ದರೆ ಅದರ ಅರ್ಥವೇನು? ಎಂದಿದ್ದರು. ಇದು ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಜಾಮಿಯಾ ಮಸೀದಿ ಸಮಿತಿಯ ಅಧ್ಯಕ್ಷ ಮುದಾಸಿರ್ ನೀಡಿದ ದೂರಿನ ಆಧಾರದ ಮೇಲೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಸಿ.ಟಿ. ರವಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular