HomeKarnatakaBIG NEWS: ಮಸಾಲೆ ಅರೆಯೋದು ನಮಗೂ ಗೊತ್ತಿದೆ; ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದ ಸಿ.ಟಿ.ರವಿ

BIG NEWS: ಮಸಾಲೆ ಅರೆಯೋದು ನಮಗೂ ಗೊತ್ತಿದೆ; ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದ ಸಿ.ಟಿ.ರವಿ

ಬೆಂಗಳೂರು: ‘ಆಪರೇಷನ್ ಹಸ್ತ’ ವಿಚಾರವಾಗಿ ಮಾತನಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಕೋಳಿ ಕೇಳಿ ಯಾರೂ ಮಸಾಲೆ ಅರೆಯಲ್ಲ ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದರು. ಡಿ.ಕೆ.ಶಿವಕುಮಾರ್ ಹೇಳಿಕೆಗೆ ಇದೀಗ ಮಾಜಿ ಶಾಸಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಯಾರೂ ಕೂಡ ಕೋಳಿ ಕೇಳಿ ಮಸಾಲೆ ಅರೆಯಲ್ಲ ಎಂಬುದು ಎಲ್ಲರಿಗೂ ಗೊತ್ತು. ಆದರೆ ಮಸಾಲೆ ಅರೆಯುವುದು ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಗೊತ್ತಿರುವ ವಿದ್ಯೆಯಲ್ಲ. ಮಸಾಲೆ ಅರೆಯೋಕೆ ನಮಗೂ ಗೊತ್ತು. ನಾವೂ ಚನ್ನಾಗಿಯೇ ಅರೆಯುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲೆನಾಡಿನ ಅಡುಗೆ ತಿಂದವರಿಗೆ ಗೊತ್ತು. ಖಾರ ಹೇಗಿರುತ್ತೆ ಎಂಬುದು ಎಂದು ತಿರುಗೇಟು ನೀಡಿದ್ದಾರೆ. ಯಾರೂ ಕೂಡ ಕಾಂಗ್ರೆಸ್ ಗೆ ಹೋಗುತ್ತಿಲ್ಲ. ಬಿಜೆಪಿಯನ್ನು ಕಟ್ಟಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ. ಹಾಗಾಗಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಸೇರುತ್ತಾರೆ ಎಂಬುದು ಕೇವಲ ವದಂತಿ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular