HomeKarnatakaBIG NEWS: ರಾಜ್ಯದಲ್ಲಿ ಸಿಎಎ ಜಾರಿ ವಿಚಾರ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

BIG NEWS: ರಾಜ್ಯದಲ್ಲಿ ಸಿಎಎ ಜಾರಿ ವಿಚಾರ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಅಧಿಸೂಚನೆ ಹೊರಡಿಸಿದ್ದು, ದೇಶಾದ್ಯಂತ ಜಾರಿಗೆ ನಿರ್ಧರಿಸಲಾಗಿದೆ. ಆದರೆ ವಿಪಕ್ಷಗಳು ಸಿಎಎ ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಈ ನಡುವೆ ರಾಜ್ಯದಲ್ಲಿ ಸಿಎಎ ಜಾರಿಯಾಗಲಿದೆಯೇ ಎಂಬ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಿ.ಪರಮೇಶ್ವರ್, ಸಿಎಎ ಜಾರಿ ವಿಚಾರವಾಗಿ ಇನ್ನೂ ಚರ್ಚೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಸಿಎಎ ಜಾರಿ ವಿಚಾರ ಚರ್ಚಿಸಿಲ್ಲ. ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ನಡೆಸಿ ಚರ್ಚೆ ಮಾಡಲಿದ್ದಾರೆ. ಸಿಎಎ ಜಾರಿ ಮಾಡಬೇಕಾ? ತಿರಸ್ಕರಿಸಬೇಕಾ ಎಂಬುದರ ಬಗ್ಗೆ ಎಲ್ಲವೂ ಸಂಪುಟ ಸಭೆಯಲ್ಲಿ ತೀರ್ಮನವಾಗಲಿದೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular