HomeKarnatakaBIG NEWS: ಕಸ್ಟಮರ್ ಮನೆಯ 25 ಲಕ್ಷ ಮೌಲ್ಯದ ಚಿನ್ನಾಭರಣವನ್ನೇ ಕದ್ದ ಕ್ಯಾಬ್ ಡ್ರೈವರ್ ಅರೆಸ್ಟ್

BIG NEWS: ಕಸ್ಟಮರ್ ಮನೆಯ 25 ಲಕ್ಷ ಮೌಲ್ಯದ ಚಿನ್ನಾಭರಣವನ್ನೇ ಕದ್ದ ಕ್ಯಾಬ್ ಡ್ರೈವರ್ ಅರೆಸ್ಟ್

ಬೆಂಗಳೂರು: ಕಸ್ಟಮರ್ ಮನೆಯಲ್ಲಿಯೇ ಚಿನ್ನಾಭರಣ ಕಳ್ಳತನ ಮಾಡಿದ್ದ ಕ್ಯಾಅಬ್ ಡ್ರೈವರ್ ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಕದ್ದ ಚಿನ್ನಾಭರಣಗಳನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ.

ಕಸ್ಟಮರ್ ಮನೆಯಲ್ಲಿ 25 ಲಕ್ಷ ಮೌಲ್ಯದ ಚಿನ್ನಾಭರಣ ದೊಚ್ಚಿದ್ದ ಕ್ಯಾಬ್ ಚಾಲಕನನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರೆಹಮಾನ್ ಬಂಧಿತ ಆರೋಪಿಯಾಗಿದ್ದು, ಚಿನ್ನಾಭರಣ ಸಮೇತ ಚಾಲಕನನ್ನು ಬಂಧಿಸಲಾಗಿದೆ.

ಫೆಬ್ರವರಿ 11 ಶಾಪಿಂಗ್​​ಗೆ ಮುಂಬೈಗೆ ಹೊರಟಿದ್ದ ದಂಪತಿ, ಹೆಬ್ಬಾಳದಿಂದ ಯಶವಂತಪುರಕ್ಕೆ ಕ್ಯಾಬ್ ಬುಕ್ ಮಾಡಿದ್ದರು. ಈ ವೇಳೆ ಸೈಯದ್ ಸಲ್ಮಾನ್ ಪತ್ನಿಗೆ ಮನೆಯಲ್ಲಿ ಚಿನ್ನಾಭರಣ ಇರುವ ಕಪಾಟು ಲಾಕ್ ಮಾಡಿದ್ದೀಯಾ ಎಂದು ಕೇಳಿದ್ದರು. ಮಾರ್ಗ ಮಧ್ಯೆ ಮೂರು ದಿನಗಳ ಕಾಲ ಮನೆಗೆ ವಾಪಾಸ್ ಬರಲ್ಲ ಎಂದು ಇಬ್ಬರೂ ಮಾತಾಡಿದ್ದನ್ನೂ ಕ್ಯಾಬ್ ಚಾಲಕ ಆರೋಪಿ ಕೇಳಿಸಿಕೊಂಡಿದ್ದ. ಸೈಯದ್ ಕುಟುಂಬವನ್ನು ಯಶವಂತಪುರಕ್ಕೆ ಡ್ರಾಪ್ ಮಾಡಿದ್ದ ಕ್ಯಾಬ್ ಚಾಲಕ ಅಬ್ದುಲ್ ರೆಹಮಾನ್, ಹೆಬ್ಬಾಳಕ್ಕೆ ವಾಪಸ್ ಬಂದಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗೆ ಬಂದವನು ಸೈಯದ್ ಸಲ್ಮಾನ್ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ. ಮನೆಯಲ್ಲಿದ್ದ 25 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾತ್ರಿಯಾಗಿದ್ದ. ಸೈಯದ್ ಹಾಗೂ ಪತ್ನಿ ಪ್ರವಾಸ ಮುಗಿಸಿ ವಾಪಾಸ್ ಆದಾಗ ಮನೆಯಲ್ಲಿ ಕಳ್ಳತನವಾಗಿರುವುದನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ. ಸಿಸಿ ಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಕ್ಯಾಬ್ ಚಾಲಕ ಬಂದಿರೋದು ಪತ್ತೆಯಾಗಿದೆ.

ತಕ್ಷಣ ದಂಪತಿ ಹೆಬ್ಬಾಳ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಕ್ಯಾಬ್ ಚಾಲಕನನ್ನು ಪತ್ತೆ ಮಾಡಿ ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ. ಕ್ಯಾಬ್ ಚಾಲಕ ಅಬ್ದುಲ್ ರೆಹಮಾನ್ ಈ ಹಿಂದೆಯೂ ಇದೇ ರಿತಿಯ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಜಾಮೀನಿನ ಮೇಲೆ ಹೊರ ಬಂದಿದ್ದ ಎಂಬುದು ಗೊತ್ತಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular