HomeKarnatakaರಾಜ್ಯದ ಯುವಕರಿಗೆ ಗುಡ್ ನ್ಯೂಸ್: ಉದ್ಯೋಗ ಕಲ್ಪಿಸಲು 100 ಕೋಟಿ ರೂ. ವೆಚ್ಚದಲ್ಲಿ ‘ನಿಪುಣ ಕರ್ನಾಟಕ’...

ರಾಜ್ಯದ ಯುವಕರಿಗೆ ಗುಡ್ ನ್ಯೂಸ್: ಉದ್ಯೋಗ ಕಲ್ಪಿಸಲು 100 ಕೋಟಿ ರೂ. ವೆಚ್ಚದಲ್ಲಿ ‘ನಿಪುಣ ಕರ್ನಾಟಕ’ ಯೋಜನೆ ಆರಂಭ

ಬೆಂಗಳೂರು: ಆಧುನಿಕ ತಂತ್ರಜ್ಞಾನಗಳಲ್ಲಿ ಜಾಗತಿಕ ಸ್ಪರ್ಧಾತ್ಮಕತೆಗಾಗಿ ಕೌಶಲ ತರಬೇತಿ ನೀಡುವ ʼನಿಪುಣ ಕರ್ನಾಟಕʼ ಯೋಜನೆ ಆರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಈ ಯೋಜನೆಯನ್ನು 100 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. 2024-25ನೇ ಸಾಲಿನಲ್ಲಿ ಈ ಯೋಜನೆಯನ್ನು 10 ಕೋಟಿ ರೂ. ವೆಚ್ಚದಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಲಾಗುವುದು. ಈ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಉದಯೋನ್ಮುಖ ತಂತ್ರಜ್ಞಾನಗಳ ಕ್ಷೇತ್ರದ ಕೈಗಾರಿಕೆಗಳ ಬೇಡಿಕೆಗಳನ್ನು ಈಡೇರಿಸಲು ಮತ್ತು ಕರ್ನಾಟಕದ ಯುವಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗವಕಾಶ ಕಲ್ಪಿಸುವ ಉದ್ದೇಶದಿಂದ ಕೌಶಲ ಮತ್ತು ಪುನರ್‌ ಕೌಶಲ ಹಾಗೂ ವೃತ್ತಿಪರ ತರಬೇತಿ ನೀಡಲಾಗುವುದು ಎಂದು ಕಾನೂನು ಸಚಿವ ಹೆಚ್‌.ಕೆ. ಪಾಟೀಲ್‌ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular