HomeLatest Newsಬೆಂಗಳೂರಿನಲ್ಲಿ 250 ಕೋಟಿ ರೂ. ವೆಚ್ಚದಲ್ಲಿ 3ನೇ ಅತಿದೊಡ್ಡ ಪಾರ್ಕ್ 'ವಿಶ್ವಗುರು ಬಸವಣ್ಣ ಜೀವ ವೈವಿಧ್ಯ...

ಬೆಂಗಳೂರಿನಲ್ಲಿ 250 ಕೋಟಿ ರೂ. ವೆಚ್ಚದಲ್ಲಿ 3ನೇ ಅತಿದೊಡ್ಡ ಪಾರ್ಕ್ ‘ವಿಶ್ವಗುರು ಬಸವಣ್ಣ ಜೀವ ವೈವಿಧ್ಯ ಉದ್ಯಾನ’ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 153 ಎಕರೆ ವಿಸ್ತೀರ್ಣದಲ್ಲಿ ವಿಶ್ವಗುರು ಬಸವಣ್ಣ ಜೀವ ವೈವಿಧ್ಯ ಉದ್ಯಾನವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಈ ಮೂಲಕ ಕಬ್ಬನ್ ಪಾರ್ಕ್, ಲಾಲ್ಬಾಗ್ ಬಳಿಕ ಬೆಂಗಳೂರಿನ ಮೂರನೇ ಅತಿ ದೊಡ್ಡ ಪಾರ್ಕ್ ಇದಾಗಲಿದೆ. ವಿಧಾನಸೌಧದಲ್ಲಿ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಈ ಹಿಂದೆ ಅರಣ್ಯ ಇಲಾಖೆ ಬೆಂಗಳೂರು ಉತ್ತರ ತಾಲೂಕು ಯಲಹಂಕ ಸಮೀಪ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ಪ್ರದೇಶವನ್ನು ನೆಡುತೋಪು ಬೆಳೆಸಲು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಕ್ಕೆ ನೀಡಲಾಗಿತ್ತು. ಈ ಜಾಗವನ್ನು ಈಗ ಇಲಾಖೆಗೆ ಮರಳಿ ಪಡೆಯಲಾಗಿದ್ದು ಇಲ್ಲಿರುವ ನೀಲಗಿರಿ ಮರಗಳನ್ನು ಹಂತ ಹಂತವಾಗಿ ತೆಗೆದು ಸ್ಥಳೀಯ ಪ್ರಭೇದ ಗಿಡಮರಗಳನ್ನು ಬೆಳೆಸಿ ಜಲಗುಂಡಿ ನಿರ್ಮಿಸಿ ವಿಶ್ವಗುರು ಬಸವಣ್ಣ ಜೈವಿಕ ಉದ್ಯಾನವನ ನಿರ್ಮಿಸಲು 50 ಕೋಟಿ ಮಂಜೂರು ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ನಾನು ಸಚಿವನಾದ ನಂತರ ಕೈಗೊಂಡ ಕನಸಿನ ಯೋಜನೆ ಇದಾಗಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಸಂಪುಟ ಸಹೋದ್ಯೋಗಿಗಳಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದ್ದಾರೆ. ಈ ಉದ್ಯಾನವನ ನಿರ್ಮಾಣಕ್ಕೆ ಒಟ್ಟು 250 ಕೋಟಿ ರೂಪಾಯಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಮೊದಲು 50 ಕೋಟಿ ರೂ. ಬಿಡುಗಡೆಗೆ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಮೂರು ವರ್ಷದಲ್ಲಿ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ನಂತರ ಅನೇಕ ಕಂಪನಿಗಳ ಸಿಎಸ್ಆರ್ ಫಂಡ್ ಬಳಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1760 ರಲ್ಲಿ 240 ಎಕರೆ ಪ್ರದೇಶದಲ್ಲಿ ಬೆಂಗಳೂರಿನಲ್ಲಿ ಲಾಲ್ಬಾಗ್ ನಿರ್ಮಾಣವಾಗಿತ್ತು. 1870 ರಲ್ಲಿ 197 ಎಕರೆ ಪ್ರದೇಶದಲ್ಲಿ ಕಬ್ಬನ್ ಪಾರ್ಕ್ ನಿರ್ಮಾಣ ಮಾಡಲಾಗಿತ್ತು. ನಂತರ ಹಲವು ಸಣ್ಣ ಪಾರ್ಕ್ ಗಳನ್ನು ನಿರ್ಮಾಣ ಮಾಡಲಾಗಿದೆಯಾದರೂ ಬೃಹತ್ ಪಾರ್ಕ್ ಗಳ ನಿರ್ಮಾಣವಾಗಿರಲಿಲ್ಲ. ಅಂತಹ ಒಂದು ಬೃಹತ್ ಜೀವ ವೈವಿಧ್ಯ ಉದ್ಯಾನವನ್ನು ನಮ್ಮ ಸರ್ಕಾರ ಜನತೆಗೆ ಸಮರ್ಪಿಸುತ್ತಿದೆ. ಇದು ಬೆಂಗಳೂರಿನ ಮೂರನೇ ಅತಿ ದೊಡ್ಡ ಪಾರ್ಕ್ ಎಂಬ ಖ್ಯಾತಿಗೆ ಪಾತ್ರವಾಗಲಿದೆ. ಔಷಧಿಯ ಸಸ್ಯವನ, ಪಕ್ಷಿಲೋಕ, ಸ್ಥಳೀಯ ಜಾತಿಯ ಮರಗಳು, ನೂರಾರು ಪ್ರಭೇದದ ಸಸಿಗಳನ್ನು ನೆಟ್ಟು ಬೆಳೆಸಲಾಗುವುದು ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular