BIG NEWS : ‘PSI’ ಹಗರಣದ ತನಿಖೆಗೆ ‘SIT’ ರಚಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಪಿಎಸ್ಐ ( PSI)   ಹಗರಣದ ತನಿಖೆಗೆ SIT ರಚಿಸಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸಂಪುಟ ಸಭೆ ಬಳಿಕ ಮಾತನಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ ಈ ಬಗ್ಗೆ ಮಾಹಿತಿ ನೀಡಿದರು.
1. PSI ನೇಮಕಾತಿ ಹಗರಣ ಸಂಬಂಧ ಬಿ.ವೀರಪ್ಪ ಸಮಿತಿ ರಚಿಸಿದ್ವಿ. ಈ ಸಂಬಂಧ ಬಿ.ವೀರಪ್ಪ ನೇತೃತ್ವದ ಸಮಿತಿ ವರದಿ ಸಲ್ಲಿಕೆ ಮಾಡಿದೆ. ಸರ್ಕಾರಿ, ಖಾಸಗಿ ವ್ಯಕ್ತಿಗಳು ಸೇರಿ 113 ಜನರು ಭಾಗಿ ಎಂದು ವರದಿ ನೀಡಲಾಗಿದೆ. ಪ್ರಕರಣ ಸಂಬಂಧ ಎಸ್ಟಿಐ ರಚಿಸಬೇಕೆಂದು ವೀರಪ್ಪ ಹೇಳಿದ್ದಾರೆ. ಹೆಚ್ಚುವರಿ ತನಿಖೆಗಾಗಿ ಎಸ್ಐಟಿ ರಚಿಸಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. 2023ರ ಅಕ್ಟೋಬರ್ನಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿರುವುದು ಕೆಲವು ದಿನಗಳ ಬಳಿಕ ಬಹಿರಂಗವಾಗಿತ್ತು. ತನಿಖೆ ನಡೆಸಿದ್ದ ಸಿಐಡಿ ಪೊಲೀಸರು, 110 ಜನರನ್ನು ಬಂಧಿಸಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read