HomeKarnatakaBREAKING: ಹುಬ್ಬಳ್ಳಿಯಿಂದ ವಿಭಜನೆಯಾಗಿ ಧಾರವಾಡ ಪ್ರತ್ಯೇಕ ಪಾಲಿಕೆ ರಚನೆ, ಸಿಹಿ ಹಂಚಿ ಸಂಭ್ರಮಾಚರಣೆ

BREAKING: ಹುಬ್ಬಳ್ಳಿಯಿಂದ ವಿಭಜನೆಯಾಗಿ ಧಾರವಾಡ ಪ್ರತ್ಯೇಕ ಪಾಲಿಕೆ ರಚನೆ, ಸಿಹಿ ಹಂಚಿ ಸಂಭ್ರಮಾಚರಣೆ

ಧಾರವಾಡ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆಯಾದ ಹಿನ್ನೆಲೆಯಲ್ಲಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಸಂಭ್ರಮಾಚರಣೆ ನಡೆಸಲಾಗಿದೆ. ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ಸಮಿತಿ ವತಿಯಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ, ಸಂಭ್ರಮಾಚರಣೆ ನಡೆಸಲಾಗಿದೆ.

2014ರಲ್ಲಿಯೇ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಒತ್ತಾಯ ಕೇಳಿ ಬಂದಿತ್ತು. ಧಾರವಾಡದ ಜನಸಂಖ್ಯೆ 6.5 ಲಕ್ಷ ದಾಟಿರುವುದರಿಂದ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಆಗ್ರಹಿಸಲಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಬಗ್ಗೆ ಘೋಷಣೆ ಮಾಡಲಾಗಿದ್ದು, ಸಂಭ್ರಮಾಚರಣೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular