ಬೆಂಗಳೂರು: ರಾಜ್ಯದಲ್ಲಿ ನಿರ್ಮಾಣವಾದ ಕಟ್ಟಡಗಳಿಗೆ ಓಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕ ನೀಡಲು ಒಂದು ಬಾರಿಗೆ ಅನ್ವಯಿಸುವಂತೆ ನಿಯಮಗಳನ್ನು ಸಡಿಲಿಕೆ ಮಾಡುವ ಬಗ್ಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ರಾಜ್ಯದಲ್ಲಿ ಸುಪ್ರೀಂ ಕೋರ್ಟ್ ಆದೇಶದ ನೆಪ ನೀಡಿ ಓಸಿ, ಸಿಸಿ ಇಲ್ಲದ ಕಟ್ಟಡಗಳಿಗೆ ವಿದ್ಯುತ್, ನೀರು, ಒಳಚರಂಡಿ ಸಂಪರ್ಕ ನೀಡದಂತೆ ಆದೇಶ ಹೊರಡಿಸಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಈಗಾಗಲೇ ನಿರ್ಮಾಣವಾಗಿರುವ ಸಾವಿರಾರು ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಸಿಗದೇ ಸಮಸ್ಯೆಯಾಗಿದೆ.
ಓಸಿ, ಸಿಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕ ನೀಡಲು ಒಂದು ಬಾರಿಗೆ ಅನ್ವಯವಾಗುವಂತೆ ನಿಯಮ ಸಡಿಲಿಕೆ ಮಾಡುವ ಬಗ್ಗೆ ಗುರುವಾರದ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ್ದು, ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮುಂದಿನ ಸಂಪುಟ ಸಭೆಗೆ ವಿಷಯವನ್ನು ಮುಂದೂಡಲಾಗಿದೆ ಎನ್ನಲಾಗಿದೆ.