ನವದೆಹಲಿ: ನವೆಂಬರ್ ತಿಂಗಳಿನಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ವಿಧಾನಪರಿಷತ್ ಮುಖ್ಯಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಲಿಂ ಅಹ್ಮದ್, ಶೇ.50ರಷ್ಟು ಸಚಿವರನ್ನು ಸಂಪುಟದಿಂದ ಕೈಬಿಡಲಾಗುವುದು. ಸಚಿವ ಸ್ಥಾನದಿಂದ ಹೊರಬಂದವರಿಗೆ ಪಕ್ಷದ ಕೆಲಸ ವಹಿಸಲಾಗುವುದು. ಹೊಸಬರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಲಾಗುವುದು ಎಂದರು.
ಕಿತ್ತೂರು ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ನೀಡಿಲ್ಲ. ಎರಡು ದಶಕಗಳಿಂದ ಈ ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.