HomeKarnatakaಖಂಡಿತವಾಗಿಯೂ ಈ ವಾರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ: ಸಿಎಂ ಡಿ.ಕೆ. ಶಿವಕುಮಾರ್

ಖಂಡಿತವಾಗಿಯೂ ಈ ವಾರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಖಂಡಿತವಾಗಿಯೂ ಈ ವಾರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಬಹುದು, ಆಗಸ್ಟ್ ಮೊದಲ ವಾರದಲ್ಲಿ ಅಂದರೆ ಆಗಸ್ಟ್ 6 ರಿಂದ ವಿಧಾನ ಮಂಡಲ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆ ವೇಳೆಗೆ ಸಂಪುಟ ವಿಸ್ತರಣೆ ಆಗಿರಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಭಾನುವಾರ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಾರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಆಗಸ್ಟ್ 6ಕ್ಕೆ ವಿಧಾನ ಮಂಡಲ ಅಧಿವೇಶನ ಶುರುವಾಗಲಿದ್ದು, ಆ ಹೊತ್ತಿಗೆ ಸಂಪುಟ ವಿಸ್ತರಣೆ ಆಗಿರಲಿದೆ ಎಂದು ಹೇಳಿದ್ದಾರೆ.

ಅಧಿವೇಶನ ಆರಂಭಕ್ಕೆ ಮೊದಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆಯೇ ಎನ್ನುವ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಅಗತ್ಯವಾದರೆ ದೆಹಲಿಗೆ ಹೋಗುತ್ತೇನೆ ಎಂದು ಅವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular