HomeKarnatakaಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆಯಾಗಲಿದೆ: ಸಚಿವ ಎಂ.ಬಿ.ಪಾಟೀಲ್ ಮಾಹಿತಿ

ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆಯಾಗಲಿದೆ: ಸಚಿವ ಎಂ.ಬಿ.ಪಾಟೀಲ್ ಮಾಹಿತಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ.ಪಾಟೀಲ್, ಇನ್ನು ಎರಡು ಮೂರು ದಿನಗಳಲ್ಲಿ ಸಂಪುಟದ ಬಗ್ಗೆ ಚರ್ಚೆಯಾಗಲಿದೆ ಎಂದರು.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಇನ್ನು ಎರಡು ಮೂರು ದಿನಗಳಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಯಲಿದೆ. ನೀಟ್ ಅಕ್ರಮ ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಹಾಗಾಗಿ ಎಲ್ಲರೂ ಬ್ಯುಸಿ ಇದ್ದಾರೆ. ಶೀಘ್ರದಲ್ಲೇ ಸಂಪುಟ ವಿಸ್ತರಣೆಯಾಗಲಿದೆ ಎಂದರು.

ಅಧಿವೇಶನ ಆರಂಭಕ್ಕೂ ಮುನ್ನ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಯಾರಿಗೆಲ್ಲ ಮಂತ್ರಿ ಸ್ಥಾನ ನೀಡಬೇಲು ಎಂಬುದನ್ನು ಹೈಕಮಾಂಡ್ ನಾಯಕರೇ ಅಂತಿಮವಾಗಿ ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular