ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಲೋಕಭವನದ ಗಾಜಿನಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ನೂತನ ಸಚಿವರಾಗಿ ಅಜಯ್ ಸಿಂಗ್, ಹೆಚ್.ಸಿ ಬಾಲಕೃಷ್ಣ, ಕೆ.ಎಸ್.ಬಸವಂತಪ್ಪ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಬಸವರಾಜ್ ರಾಯರೆಡ್ಡಿ, ಎನ್.ಚಲುವರಾಯಸ್ವಾಮಿ, ಎಸ್.ಎಸ್.ಮಲ್ಲಿಕಾರ್ಜುನ್, ಬಿ.ನಾಗೇಂದ್ರ, ನರೇಂದ್ರಸ್ವಾಮಿ, ಪುಟ್ಟರಂಗಶೆಟ್ಟಿ, ರಘುಮೂರ್ತಿ, ರಿಜ್ವಾನ್ ಅರ್ಷದ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್, ಶಿವಲಿಂಗೇಗೌಡ, ಶಿವರಾಜ್ ತಂಗಡಗಿ, ವಿಜಯಾನಂದ ಕಾಶಪ್ಪನವರ್, ಜಮೀರ್ ಅಹ್ಮದ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. 19 ಸಚಿವರು ಪದಗ್ರಹಣ ಮಾಡಿದ್ದಾರೆ.
ಈ ವೇಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಡಿಸಿಎಂ ಪರಮೇಶ್ವರ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಸಂಪುಟ ಸಚಿವರು ಉಪಸ್ಥಿತರಿದ್ದರು.

