HomeKarnatakaಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆಯಾಗಿದೆ. ಇಂದೇ ನೂತನ ಸಚಿವರ ಪ್ರಮಾಣವಚನ ನಡೆಯುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಈಗ ಇನ್ನೂ ಎರಡು ಮೂರು ದಿನ ಮುಂದೂಡಿಕೆಯಾಗಲಿದೆ ಎಂದು ತಿಳಿದುಬಂದಿದೆ.

ಹೈಕಮಾಂಡ್ ನಾಯಕರ ಅಲಭ್ಯತೆಯಿಂದಾಗಿ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ವಿಳಂಬವಾಗಿದೆ. ದೆಹಲಿಯಲ್ಲಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಬೆಂಗಳೂರಿಗೆ ವಾಪಸ್ ಆಗಲಿದ್ದು, ವಾರಾಂತ್ಯದಲ್ಲಿ ಮತ್ತೆ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆ ನಡೆಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಯ ಕರ್ನಾಟಕ ಭವನದಲ್ಲಿ ಮಂಗಳವಾರ ರಾತ್ರಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಂಧನದ ಬೆಳವಣಿಗೆಯಿಂದ ಸಂಪುಟ ವಿಸ್ತರಣೆ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಸಂಪುಟ ವಿಸ್ತರಣೆಯನ್ನು ಮುಂದೂಡಲು ಇಷ್ಟವಿಲ್ಲ. ಆದರೂ, ಅಂತಿಮ ತೀರ್ಮಾನವು ಹೈಕಮಾಂಡ್ ಲೆಕ್ಕಾಚಾರದಂತೆ ಆಗಲಿದೆ ಎಂದು ಸ್ಪಷ್ಟಪಡಿಸಿದರು.

ಸಂಪುಟ ವಿಸ್ತರಣೆ ವೇಳೆ ಹಿರಿಯರು ಮತ್ತು ಕಿರಿಯರಿಗೆ ಸಮಾನ ಅವಕಾಶ ಕಲ್ಪಿಸಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಚಿವ ಸ್ಥಾನಕ್ಕೆ ಅರ್ಹರಾದ ಅನೇಕರು ಇದ್ದು, ಸಾಧ್ಯವಾದಷ್ಟು ಖಾಲಿ ಸ್ಥಾನಗಳನ್ನು ಭರ್ತಿ ಮಾಡುವ ಆಶಯವಿದೆ ಎಂದೂ ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular