HomeKarnatakaBIG NEWS: ಮೇ 20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಎಂಎಲ್ ಸಿ ಸಲಿಂ ಅಹ್ಮದ್...

BIG NEWS: ಮೇ 20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಎಂಎಲ್ ಸಿ ಸಲಿಂ ಅಹ್ಮದ್ ಮಾಹಿತಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಅತ್ತ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಬೀಡು ಬಿಟ್ಟು ಹೈಕಮಾಂಡ್ ನಾಯಕರನ್ನು ಭೇಟಿಯಾದ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಎಂಎಲ್ ಸಿ ಸಲಿಂ ಅಹ್ಮದ್ ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸಿದ್ದಿಗಾರರೊಂದಿಗೆ ಮಾತನಾಡಿದ ಸಲಿಂ ಅಹ್ಮದ್, ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆಯಾಗಬಹುದು. ಮೇ 4 ರ ಚುನಾವಣಾ ಫಲಿತಾಂಶದ ಬಳಿಕ ಈ ಬಗ್ಗೆ ಚರ್ಚೆಯಾಗಲಿದೆ ಎಂದು ಹೇಳಿದರು.

ಶೇ.೫೦ರಷ್ಟು ಸಚಿವರನ್ನು ಪಕ್ಷದ ಕೆಲಸಕ್ಕೆ ನಿಯೋಜಿಸಬೇಕು. ಹಿರಿಯ ಅನುಭವಿ ಸಚಿವರನ್ನು ಪಕ್ಷದ ಕೆಲಸಗಳಿಗೆ, ಪಕ್ಷ ಸಂಘಟನೆ ಕೆಲಸಗಳಿಗೆ ನಿಯೋಜಿಸಬೇಕು. ಇದರಿಂದ ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ. ಉಳಿದವರಿಗೆ ಅವಕಾಶ ನೀಡಬೇಲು ಎಂದು ವರಿಷ್ಠರಿಗೆ ಈಗಾಗಲೇ ನಾವು ಮನವಿ ಮಾಡಿದ್ದೆವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಕೆಲ ಶಾಸಕರ ಒಂದು ಟೀಂ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚಿಸಿದೆ. ಅಂತಿಮವಾಗಿ ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular