HomeKarnatakaBIG NEWS: ಒಳ ಮೀಸಲಾತಿಗೆ ಸಂಪುಟ ಒಪ್ಪಿಗೆ, 3 ತಿಂಗಳು ಯಾವುದೇ ಹೊಸ ನೇಮಕಾತಿ ಇಲ್ಲ

BIG NEWS: ಒಳ ಮೀಸಲಾತಿಗೆ ಸಂಪುಟ ಒಪ್ಪಿಗೆ, 3 ತಿಂಗಳು ಯಾವುದೇ ಹೊಸ ನೇಮಕಾತಿ ಇಲ್ಲ

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳಮಿಸಲಾತಿ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಅಗತ್ಯ ದತ್ತಾಂಶ ಸಂಗ್ರಹಣೆ ಬಗ್ಗೆ ವರದಿ ನೀಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚಿಸಲು ಮಹತ್ವದ ತೀರ್ಮಾನ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಸ್ಸಿ ವರ್ಗದ ಬಹುದೊಡ್ಡ ಬೇಡಿಕೆ ಒಳ ಮೀಸಲಾತಿ ಜಾರಿ ಸಂಬಂಧ ಒಪ್ಪಿಗೆ ನೀಡಲಾಗಿದೆ. ದತ್ತಾಂಶ ಸಂಗ್ರಹಕ್ಕೆ ಆಯೋಗ ರಚನೆ ಮಾಡಲಿದ್ದು, ಮೂರು ತಿಂಗಳ ಒಳಗಾಗಿ ಪ್ರಾಯೋಗಿಕ ದತ್ತಾಂಶ ವರದಿ ನೀಡಬೇಕು.

ವರದಿ ಬರುವವರೆಗೆ ಇನ್ನು ಮುಂದೆ ಹೊಸದಾಗಿ ಯಾವುದೇ ನೇಮಕಾತಿ ಅಧಿಸೂಚನೆ ಹೊರಡಿಸಬಾರದು ಎಂದು ನೇಮಕಾತಿಗಳಿಗೆ ತಡೆ ನೀಡಲಾಗಿದೆ. ಈ ಮೂಲಕ ಮೂರು ದಶಕಗಳ ಒಳ ಮೀಸಲಾತಿ ಹೋರಾಟಕ್ಕೆ ಕೊನೆಗೂ ಸ್ಪಂದನೆ ವ್ಯಕ್ತವಾಗಿದ್ದು, ಒಳ ಮೀಸಲಾತಿ ಜಾರಿ ನಿರ್ಣಾಯಕ ಹಂತ ತಲುಪಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular