HomeKarnatakaಆರ್.ವಿ. ದೇಶಪಾಂಡೆ, ಬಿ.ಆರ್. ಪಾಟೀಲ್, ರಾಯರೆಡ್ಡಿ ಹುದ್ದೆ ರಕ್ಷಣೆಗೆ ಸುಗ್ರೀವಾಜ್ಞೆ

ಆರ್.ವಿ. ದೇಶಪಾಂಡೆ, ಬಿ.ಆರ್. ಪಾಟೀಲ್, ರಾಯರೆಡ್ಡಿ ಹುದ್ದೆ ರಕ್ಷಣೆಗೆ ಸುಗ್ರೀವಾಜ್ಞೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆರ್ಥಿಕ ಸಲಹೆಗಾರರಾಗಿ ನೇಮಕವಾದ ಬಸವರಾಜ ರಾಯರೆಡ್ಡಿ, ಸಲಹೆಗಾರ ಬಿ.ಆರ್. ಪಾಟೀಲ್, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಅವರ ಹುದ್ದೆಗಳಿಗೆ ರಕ್ಷಣೆ ನೀಡಲು ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಹುದ್ದೆಗಳಿಗೆ ರಕ್ಷಣೆಗೆ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಲಾಗಿದೆ. ಕರ್ನಾಟಕ ವಿಧಾನ ಮಂಡಲ(ಅನರ್ಹತ ನಿವಾರಣೆ) ತಿದ್ದುಪಡಿ ವಿಧೇಯಕವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.

ಇದರಡಿ ವಿಧಾನಸಭೆ ಅಥವಾ ವಿಧಾನಪರಿಷತ್ ಸದಸ್ಯರಾಗಿದ್ದಾರೆ ಎನ್ನುವ ಕಾರಣಕ್ಕೆ ಮುಖ್ಯಮಂತ್ರಿಗಳಿಗೆ ಯಾವುದೇ ವ್ಯಕ್ತಿ ಆರ್ಥಿಕ ಸಲಹೆಗಾರರು, ಯಾವುದೇ ಆಯೋಗದ ಅಧ್ಯಕ್ಷರು ಅಥವಾ ಸದಸ್ಯರಾಗಿ ನೇಮಕಗೊಂಡರೆ ಅನರ್ಹರಾಗುವುದನ್ನು ತಪ್ಪಿಸಲು ಈ ತಿದ್ದುಪಡಿ ತರಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular