HomeKarnatakaಕಾಂಗ್ರೆಸ್ ಶಾಸಕರಿಗೆ ಭರ್ಜರಿ ಕೊಡುಗೆ: ತಲಾ 25 ಕೋಟಿ ರೂ. ಅನುದಾನ

ಕಾಂಗ್ರೆಸ್ ಶಾಸಕರಿಗೆ ಭರ್ಜರಿ ಕೊಡುಗೆ: ತಲಾ 25 ಕೋಟಿ ರೂ. ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ 9 ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ರೂ. ಭರ್ಜರಿ ಅನುದಾನ ನೀಡಲು ಅನುಮೋದನೆ ದೊರೆತಿದೆ.

ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ತಲಾ 25 ಕೋಟಿ ರೂ. ಅನುದಾನ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಹೇಳಲಾಗಿದೆ.

ಸಚಿವರಾದವರ ಕ್ಷೇತ್ರ ಹೊರತುಪಡಿಸಿ ಉಳಿದ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ರೂ. ಅನುದಾನ ನೀಡಲು ಸಿಎಂ ಸಮ್ಮತಿಸಿದ್ದಾರೆ. ಶಿವಾಜಿನಗರ, ಗೋವಿಂದರಾಜ ನಗರ, ವಿಜಯನಗರ, ಪುಲಕೇಶಿ ನಗರ, ಶಾಂತಿನಗರ ಸೇರಿದಂತೆ 9 ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಲಾಗುವುದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular