ಸನ್ನಡತೆ ಆಧಾರದಲ್ಲಿ 67 ಕೈದಿಗಳ ಬಿಡುಗಡೆ, ಹಾಲಿನ ದರ 3 ರೂ. ಏರಿಕೆ, ಮೊಟ್ಟೆ ಖರೀದಿಗೆ 297 ಕೋಟಿ ರೂ.; ಸಂಪುಟ ಸಭೆ ಒಪ್ಪಿಗೆ

ಬೆಂಗಳೂರು: ಸನ್ನಡತೆ ಆಧಾರದಲ್ಲಿ 67 ಕೈದಿಗಳ ಬಿಡುಗಡೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಬೆಂಗಳೂರು ಸೆಂಟ್ರಲ್ ಜೈಲಿನ 24, ಮೈಸೂರಿನ 8, ಬೆಳಗಾವಿ 2, ಕಲಬುರಗಿ 5, ಶಿವಮೊಗ್ಗ 6, ಬಳ್ಳಾರಿ ಜೈಲಿನ 8 ಕೈದಿಗಳು, ಧಾರವಾಡ ಜಿಲ್ಲಾ ಕಾರಾಗೃಹದ ಇಬ್ಬರು ಕೈದಿಗಳ ಬಿಡುಗಡೆಗೆ ತೀರ್ಮಾನಿಸಲಾಗಿದೆ.

ಸಂಪುಟ ಸಭೆಯಲ್ಲಿ 15 ವಿಷಯಗಳು ಬಗ್ಗೆ ಚರ್ಚೆ ಮಾಡಲಾಗಿದೆ. ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಹಕಾರ ಇಲಾಖೆ ವತಿಯಿಂದ ಎಪಿಎಂಸಿಗಳಿಗೆ ರಸ್ತೆ, ಮೂಲಸೌಕರ್ಯ ಒದಗಿಸಲು 130.40 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ.

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ವಿಚಾರಕ್ಕೆ ಸಂಬಂಧಿಸಿದಂತೆ ವಿಭಾಗವಾರು ಮೊಟ್ಟೆ ಖರೀದಿಸಿ ವಿತರಿಸಲು 297 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಾರುಕಟ್ಟೆ ದರ ಮೀರದಂತೆ ಮೊಟ್ಟೆ ಖರೀದಿಸಿ ವಿತರಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಹಾಲು ದರ ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಆಗಸ್ಟ್ 1ರಿಂದ ಹಾಲಿನ ದರ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳ ಮಾಡಲಾಗುವುದು. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read