ಬೆಳಗಾವಿ(ಸುವರ್ಣಸೌಧ): ಸಕ್ರಮ ಪ್ರಾಧಿಕಾರಗಳಿಂದ ಅನುಮೋದನೆ ಪಡೆದುಕೊಳ್ಳದ ಅನಧಿಕೃತ ಬಡಾವಣೆಗಳಲ್ಲಿನ ಆಸ್ತಿಗಳಿಗೆ ಎ-ಖಾತಾ ನೀಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆದುಕೊಳ್ಳದ ವಿನ್ಯಾಸಗಳು, ವಿವಿಧ ಯೋಜನೆಗಳಲ್ಲಿ ಮಂಜೂರಾದ ನಿವೇಶನಗಳಿಗೆ ಈಗಾಗಲೇ ಬಿ -ಖಾತಾ ವಿತರಿಸಿ ತೆರಿಗೆ ವ್ಯಾಪ್ತಿಗೆ ಒಳಪಡಿಸಲಾಗುತ್ತಿದೆ. ಎ-ಖಾತಾ ನೀಡಬೇಕೆಂಬ ಬೇಡಿಕೆ ಇದ್ದು ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
