HomeKarnatakaBIG NEWS: ಸರ್ಕಾರದ ವಿವಿಧ ಇಲಾಖೆಗಳ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

BIG NEWS: ಸರ್ಕಾರದ ವಿವಿಧ ಇಲಾಖೆಗಳ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಮೀಸಲು ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವುದಾಗಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲಿಗೆ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 449 ಹುದ್ದೆಗಳ ನೇಮಕಾತಿಗೆ ಈ ನಿರ್ಧಾರ ಜಾರಿಗೆ ಬರಲಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಒಟ್ಟು 347 ಗ್ರೂಪ್ ಡಿ ನೌಕರರು, 102 ಡಾಟಾ ಎಂಟ್ರಿ ಆಪರೇಟರ್ ಗಳು ಸೇರಿ 449 ಹುದ್ದೆಗಳ ಸೇವೆಯನ್ನು ಹೊರಗುತ್ತಿಗೆ ಆಧಾರದಲ್ಲಿ ಪಡೆಯಲು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಮೀಸಲಾತಿ ಸೇರಿ ರಾಜ್ಯ ಸರ್ಕಾರದ ಹಾಲಿ ಮೀಸಲು ನಿಯಮ ಈ ಹೊರಗುತ್ತಿಗೆ ಸೇವೆಗೆ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular