HomeKarnatakaಪಡಿತರ ಚೀಟಿ ಹೊಂದಿದವರಿಗೆ ಸಿಹಿ ಸುದ್ದಿ: ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ MRI, ಸಿಟಿ ಸ್ಕ್ಯಾನ್

ಪಡಿತರ ಚೀಟಿ ಹೊಂದಿದವರಿಗೆ ಸಿಹಿ ಸುದ್ದಿ: ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ MRI, ಸಿಟಿ ಸ್ಕ್ಯಾನ್

ಬೆಂಗಳೂರು: ಪಡಿತರ ಚೀಟಿ ಇರುವವರಿಗೆ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಎಂ.ಆರ್.ಐ. ಸ್ಕ್ಯಾನ್, ಸಿಟಿ ಸ್ಕ್ಯಾನ್ ಸೌಲಭ್ಯ ಕಲ್ಪಿಸಲು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಬ್ರಾಂಡ್ ಬೆಂಗಳೂರು ಯೋಜನೆಯಡಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯ ಕೇಂದ್ರ ಮೇಲ್ದರ್ಗೇರಿಸಲು ಅನುಮೋದನೆ ನೀಡಲಾಗಿದೆ. ಮಹಾನಗರ ಪಾಲಿಕೆ ಒಟ್ಟು 13 ಹೆರಿಗೆ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲಾಗುವುದು.

10 ಮಹಾನಗರ ಪಾಲಿಕೆ, 24 ನಗರ ಪಾಲಿಕೆಗಳಲ್ಲಿ ಒಂದು ಚಿತಾಗಾರಕ್ಕೆ 4 ಕೋಟಿ ರೂಪಾಯಿ ವೆಚ್ಚದಂತೆ 126 ಕೋಟಿ ರೂ. ವೆಚ್ಚದಲ್ಲಿ ಚಿತಾಗಾರಗಳನ್ನು ನಿರ್ಮಾಣ ಮಾಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

10 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.

ಅಸ್ತಿತ್ವದಲ್ಲಿರುವ ಅಂಗ ಕಸಿ ಜೀವ ಸಾರ್ಥಕತೆ ಯೋಜನೆಗೆ ಶ್ವಾಸಕೋಶ, ಹೃದಯ ಮತ್ತು ಮೂಳೆ ಮಜ್ಜೆ ಕಸಿಯನ್ನು ಸೇರಿಸಿ ಯೋಜನೆ ವಿಸ್ತರಣೆಗೆ ಅನುಮೋದನೆ ನೀಡಲಾಗಿದೆ.

ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ 8 ಕೋಟಿ ರೂ. ವೆಚ್ಚದಲ್ಲಿ ಮೆಡಿಕಲ್ ಇನ್ಸೂರೆನ್ಸ್ ಒದಗಿಸಲು ಅನುಮೋದನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular