HomeKarnatakaನವೀಕರಿಸಬಹುದಾದ ಇಂಧನ ನೀತಿಗೆ ತಿದ್ದುಪಡಿ: ವಿದ್ಯುತ್ ಉತ್ಪಾದನೆ ಭೂಬಳಕೆ ಮಿತಿ 4 ಎಕರೆಗೆ ಹೆಚ್ಚಳ

ನವೀಕರಿಸಬಹುದಾದ ಇಂಧನ ನೀತಿಗೆ ತಿದ್ದುಪಡಿ: ವಿದ್ಯುತ್ ಉತ್ಪಾದನೆ ಭೂಬಳಕೆ ಮಿತಿ 4 ಎಕರೆಗೆ ಹೆಚ್ಚಳ

ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ನೀತಿ 20122- 25ಕ್ಕೆ ತಿದ್ದುಪಡಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನವೀಕರಿಸಬಹುದಾದ ಇಂಧನ ನೀತಿ ತಿದ್ದುಪಡಿಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಭೆಯ ಬಳಿಕ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೋಲಾರ್ ವಿದ್ಯುತ್ ಉತ್ಪಾದನೆಗೆ ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ 3.5 ಎಕರೆಯಂತೆ ಭೂ ಬಳಕೆಗೆ ನೀಡಿದ್ದ ಮಿತಿಯನ್ನು 4 ಎಕರೆಗೆ ಹೆಚ್ಚಳ ಮಾಡಲಾಗಿದೆ. ಪವನ ವಿದ್ಯುತ್ ಯೋಜನೆ ಪೂರ್ಣಗೊಳಿಸಿ ಕಾರ್ಯ ಆರಂಭ ಮಾಡಲು ಇದ್ದ ಕಾಲಾವಧಿಯನ್ನು ಮೂರು ವರ್ಷದಿಂದ ಎರಡು ವರ್ಷಕ್ಕೆ ಇಳಿಕೆ ಮಾಡಲಾಗಿದೆ. ಉದ್ಯಮಿಗಳ ಮನವಿ ಮೇರೆಗೆ ಈ ತಿದ್ದುಪಡಿ ಮಾಡಿರುವುದಾಗಿ ಸಚಿವರು ಹೇಳಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳಿಗೆ 13,708 ಕೋಟಿ ರೂ. ಸಾಲ ಪಡೆಯುವ ಸಂಬಂಧ ಸರ್ಕಾರದಿಂದ ಖಾತರಿ ನೀಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular