HomeKarnatakaರಾಜಕೀಯ ಮೇಲಾಟದಲ್ಲಿ ಕೈ ತಪ್ಪಿದ ಸಚಿವ ಸ್ಥಾನ: ರಾಜೀನಾಮೆ ನೀಡಲು ಮುಂದಾದ ಕಾಂಗ್ರೆಸ್ ಹಿರಿಯ ನಾಯಕ...

ರಾಜಕೀಯ ಮೇಲಾಟದಲ್ಲಿ ಕೈ ತಪ್ಪಿದ ಸಚಿವ ಸ್ಥಾನ: ರಾಜೀನಾಮೆ ನೀಡಲು ಮುಂದಾದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್…?

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ವಿಧಾನಸಭೆ ವಿಪಕ್ಷ ನಾಯಕರಾಗಿದ್ದ ಅವರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು.

ಈಡಿಗರ ಕೋಟಾದಿಂದ ಅವರು ಸಚಿವರಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈಡಿಗರ ಕೋಟಾದಿಂದ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ರಾಜ್ಯಸಭೆ ಸದಸ್ಯರಾಗಿ, ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಉಸ್ತುವಾರಿಯಾಗಿ ಹಾಗೂ ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿ, ವಿಪಕ್ಷ ನಾಯಕರಾಗಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದ ಹರಿಪ್ರಸಾದ್ ಸಚಿವ ಸ್ಥಾನಕಾಂಕ್ಷಿಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಹಿರಿಯ ನಾಯಕರಿಗೆ ಸಚಿವ ಸ್ಥಾನ ಮಿಸ್ ಆಗಿದೆ. ಆರ್.ವಿ. ದೇಶಪಾಂಡೆ, ಟಿ.ಬಿ. ಜಯಚಂದ್ರ, ಬಸವರಾಜ ರಾಯರೆಡ್ಡಿ ಮೊದಲಾದ ನಾಯಕರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ಬಿ.ಕೆ. ಹರಿಪ್ರಸಾದ್ ಕೂಡ ಸಚಿವ ಸ್ಥಾನ ವಂಚಿತರಾಗಿದ್ದಾರೆ.

ಸಚಿವ ಸ್ಥಾನ ಸಿಗಲ್ಲ ಎನ್ನುವುದು ಖಚಿತವಾಗುತ್ತಿದ್ದಂತೆ ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಸಮಾಧಾನಗೊಂಡಿರುವ ಹರಿಪ್ರಸಾದ್ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಕುರಿತಾಗಿ ಆಪ್ತರೊಂದಿಗೆ ಚರ್ಚೆ ಕೂಡ ನಡೆಸಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular