HomeKarnatakaBIG NEWS: ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ? ಕುತೂಹಲ ಮೂಡಿಸಿದ ಸಿಎಂ-ಡಿಸಿಎಂ ದೆಹಲಿ ಪ್ರವಾಸ

BIG NEWS: ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ? ಕುತೂಹಲ ಮೂಡಿಸಿದ ಸಿಎಂ-ಡಿಸಿಎಂ ದೆಹಲಿ ಪ್ರವಾಸ

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯಲಿದೆಯೇ? ಹೀಗೊಂದು ಚರ್ಚೆಯನ್ನು ಹುಟ್ಟುಹಾಕಿದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ದೆಹಲಿ ಪ್ರವಾಸ.

ಲೋಕಸಭಾ ಚುನಾವಣಾ ಫಲಿತಾಂಶ, ಹಗರಣಗಳ ಆರೋಪದ ಬಳಿಕ ಇದೀಗ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಆಗುವ ಸಾಧ್ಯತೆ ಇದ್ದು, ಕೆಲ ಸಚಿವರ ಬದಲಾವಣೆಯಾಗಲಿದೆ ಎಂದು ಹೇಳಲಾಗುತ್ತಿದೆ.

ನಾಳೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹೈಕಮಾಂಡ್ ಜೊತೆ ಈ ನಿಟ್ಟಿನಲ್ಲಿಯೂ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಕೆಲ ಸಚಿವರ ಖಾತೆಗಳನ್ನು ಅದಲು ಬದಲು ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾಲ್ಮೀಕಿ ನಿಗಮದ ಹಗರಣದ ಬಳಿಕ ನಾಗೇಂದ್ರ ಅವರಿಂದ ತೆರವಾದ ಸಚಿವ ಸ್ಥಾನಕ್ಕೆ ನೂತನ ಸಚಿವರ ನೇಮಕ ಸೇರಿದಂತೆ ಇನ್ನು ಕೆಲ ಸಚಿವರ ಖಾತೆ ಬದಲಾವಣೆ ನಿಟ್ಟಿನಲ್ಲಿ ಸಮಾಲೋಚನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಹಾಗೂ ಡಿಸಿಎಂ ಅವರ ದೆಹಲಿ ಪ್ರವಾಸ ಸಾಕಷ್ಟು ಕುತೂಹಲ ಮೂಡಿಸಿದೆ.

 

For Latest News Updates, Join Our Whatsapp Community🚩
RELATED ARTICLES

Most Popular