HomeKarnatakaSHOCKING : ಬೆಂಗಳೂರಿನಲ್ಲಿ ಕೇಕ್ ತಿಂದು 5 ವರ್ಷದ ಮಗು ಸಾವು, ತಂದೆ-ತಾಯಿ ಅಸ್ವಸ್ಥ..!

SHOCKING : ಬೆಂಗಳೂರಿನಲ್ಲಿ ಕೇಕ್ ತಿಂದು 5 ವರ್ಷದ ಮಗು ಸಾವು, ತಂದೆ-ತಾಯಿ ಅಸ್ವಸ್ಥ..!

ಬೆಂಗಳೂರು: ಕೇಕ್ ತಿಂದು 5 ವರ್ಷದ ಮಗು ಸಾವನ್ನಪ್ಪಿದ್ದು, ಇಬ್ಬರು ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನ ಕೆ.ಪಿ.ಅಗ್ರಹಾರದ ಭುವನೇಶ್ವರಿ ನಗರದಲ್ಲಿ ನಡೆದಿದೆ.

5 ವರ್ಷದ ಧೀರಜ್ ಮೃತ ಬಾಲಕ. ಕೇಕ್ ಸೇವಿಸಿದ ಬಳಿಕ ತೀವ್ರ ಅಸ್ವಸ್ಥಗೊಂಡಿದ್ದ ಬಾಲಕ ತಕ್ಷಣ ಸಾವನ್ನಪ್ಪಿದ್ದಾನೆ. ಕೇಕ್ ನಲ್ಲಿ ವಿಷಕಾರಿ ಅಂಶವಿದ್ದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಮಗುವಿನ ತಂದೆ-ತಾಯಿ ತೀವ್ರ ಅಸ್ವಸ್ಥರಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಕಿಮ್ಸ್ ಆಸ್ಪತ್ರೆ ನಿರ್ದೇಶಕ ಡಾ. ಅಂಜನಿಪ್ಪ ಮಾಹಿತಿ ನೀಡಿದ್ದು, ಕೇಕ್ ತಿಂದಿದ್ದ ಮಗು ಆಸ್ಪತ್ರೆಗೆ ಬರುವ ಮೊದಲೇ ಸಾವನ್ನಪ್ಪಿದೆ. ಮಗುವಿನ ತಂದೆ-ತಾಯಿ ತಿವ್ರ ಅಸ್ವಸ್ಥರಾಗಿದ್ದರು. ತಂದೆ ಬಾಲರಾಜ್ ಹಾಗೂ ತಾಯಿ ನಾಗಲಕ್ಷ್ಮೀ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಕ್ ತಿಂದ ಬಳಿಕ ಹೀಗಾಗಿದೆ ಎಂದು ಹೇಳುತ್ತಿದ್ದಾರೆ. ಆಹಾರ ಸೇವಿಸಿದ ಬಳಿಕ ಮಗು ಸಡನ್ ಆಗಿ ಮೃತಪಟ್ಟಿದೆ. ಅಲ್ಟ್ರಾಸೌಂಡ್ ಸ್ಕ್ಯಾನ್ ಹಾಗೂ ಮೃತ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ವರದಿ ಬಂದ ಬಳಿಕ ಯಾವ ಕಾರಣದಿಂದ ಮಗು ಸಾವನ್ನಪ್ಪಿದೆ ಎಂಬ ಬಗ್ಗೆ ನಿಖರ ಮಾಹಿತಿ ತಿಳಿಯಲಿದೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular