HomeLatest Newsಗಮನಿಸಿ : ಸಂಶೋಧನಾ ಪ್ರಬಂಧ 'ಫೆಲೊಶಿಫ್‍'ಗೆ ಅರ್ಜಿ ಆಹ್ವಾನ

ಗಮನಿಸಿ : ಸಂಶೋಧನಾ ಪ್ರಬಂಧ ‘ಫೆಲೊಶಿಫ್‍’ಗೆ ಅರ್ಜಿ ಆಹ್ವಾನ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಆಚಾರ ವಿಚಾರ, ಜಾನಪದ ಹಾಗೂ ಕಲೆಗೆ ಸಂಬಂಧಿಸಿದ ಸಂಶೋಧನಾ ಪ್ರಬಂಧಕ್ಕೆ ಫೆಲೋಶಿಫ್ ನೀಡಿ ರಚಿಸಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪದವೀಧರರು ಫೆಲೋಶಿಫ್‍ಗಾಗಿ ಅರ್ಜಿ ಸಲ್ಲಿಸಲು ಜುಲೈ, 21 ಕೊನೆಯ ದಿನವಾಗಿದೆ. ಬಂದಿರುವ ಅರ್ಜಿಗಳನ್ನು ಆಯ್ಕೆ ಸಮಿತಿಯಲ್ಲಿ ಪರಿಶೀಲಿಸಿ ನಾಲ್ಕು ಸೂಕ್ತ ಸಂಶೋಧಕರನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದವರಿಗೆ ತಲಾ ರೂ 75,000 ದಂತೆ ಫೆಲೋಶಿಫ್ ನೀಡಲಾಗುವುದು. ಈ ಹಿಂದೆ ಸಂಶೋಧನಾ ಪ್ರಬಂಧಗಳನ್ನು ಸಲ್ಲಿಸಿದವರಿಗೆ ಅವಕಾಶ ಇರುವುದಿಲ್ಲ. ಫೆಲೋಶಿಫ್‍ಗೆ ಆಯ್ಕೆಯಾದವರು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ನೀತಿ ನಿಯಮಾವಳಿಗಳಿಗೆ ಬದ್ದರಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನು ರಿಜಿಸ್ಟ್ರಾರ್ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ ದೂ.ಸಂ.08272- 223055, 6362522677 ಇಲ್ಲಿಂದ ಪಡೆದುಕೊಳ್ಳಬಹುದು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular