HomeKarnatakaಅರೆಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಅರೆಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (ಪಿಎಲ್ವಿ) ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ, ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಪ್ರಾಧ್ಯಾಪಕರು, ಕಾನೂನು ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ, ನಿವೃತ್ತ ಸರ್ಕಾರಿ ನೌಕರರು, ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ ಹಾಗೂ ಮಹಿಳೆಯರು, ಮಂಗಳಮುಖಿಯರು, ಸನ್ನಡತೆ ಹೊಂದಿದ ಕಾರಾಗೃಹ ಬಂದಿಗಳು ಮತ್ತು ಸ್ವ ಸಹಾಯ ಸಂಘಗಳ ಸದಸ್ಯರನ್ನು ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (Para Legal Volunteers) ಕಾರ್ಯನಿರ್ವಹಿಸಲು ನೇಮಕ ಮಾಡಿಕೊಳ್ಳಬೇಕಾಗಿರುತ್ತದೆ.

ಸೇವಾ ಮನೋಭಾವನೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದುಕೊಂಡು, ಭರ್ತಿಮಾಡಿ ಆಗಸ್ಟ್ 09 ಸಂಜೆ 5.30 ರೊಳಗಾಗಿ ಖುದ್ದಾಗಿ ಇದೇ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular