ಧಾರವಾಡ : ವಿದ್ಯುತ್ ದರ ಏರಿಕೆ ಖಂಡಿಸಿ ಇಂದು ಧಾರಾವಾಡ ಬಂದ್ ಗೆ ಕರೆ ನೀಡಲಾಗಿದ್ದು, ವ್ಯಾಪಾರಿಗಳು ಹಾಗೂ ಸಾರ್ವಜನಿಕ ವಲಯದಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಇಂದು ಅಂಗಡಿ ಮುಂಗಟ್ಟು ಬಂದ್ ಮಾಡಿ ಕೆಸಿಸಿ ಬ್ಯಾಂಕ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಿದ್ದಾರೆ. ವರ್ತಕರು, ಹೋಟೆಲ್, ಬೇಕರಿ ಮಾಲೀಕರು, ಎಪಿಎಂಸಿ, ವ್ಯಾಪಾರಿಗಳ ಸಂಘಟನೆ, ಉದ್ಯಮಿಗಳು ಬಂದ್ಗೆ ಬೆಂಬಲ ನೀಡಿದೆ.
ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ವಿರುದ್ಧ ಭಾರಿ ಜನಾಕ್ರೋಶ ವ್ಯಕ್ತವಾಗಿದೆ. ವಿದ್ಯುತ್ ದರ ಏರಿಕೆ ನಿರ್ಧಾರ ವಾಪಸ್ ಪಡೆಯಬೇಕು ಎಂದು ಒತ್ತಾಯ ಮಾಡಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಂಧನ ಸಚಿವ ಕೆ.ಜೆ. ಜಾರ್ಜ್ ವಿದ್ಯುತ್ ದರ ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕೇಂದ್ರ ಕಾಯ್ದೆಯಡಿ ವಿದ್ಯುತ್ ದರ ಏರಿಕೆಯಾಗಿದೆ, ಇದನ್ನು ರಾಜ್ಯ ಸರ್ಕಾರ ಕಡಿಮೆ ಮಾಡಲು ಸಾಧ್ಯವಿಲ್ಲ, ಕೆಇಆರ್ಸಿ ಒಂದು ಬಾರಿಕೆ ಏರಿಕೆ ಮಾಡಿದರೆ ಅದಕ್ಕೆ ನಾವು ಬದ್ಧರಾಗಿ ಇರಬೇಕಾಗುತ್ತದೆ ಎಂದಿದ್ದಾರೆ.
TAGGED:dharawad bandh