ದಾವಣಗೆರೆ: ಭತ್ತ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ನವೆಂಬರ್ 18ರಂದು ಹೊನ್ನಾಳಿ ಮತ್ತು ನ್ಯಾಮತಿ ಬಂದ್ ಗೆ ಕರೆ ನೀಡಲಾಗಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ಪಟ್ಟಣಗಳನ್ನು ಬಂದ್ ಮಾಡಲು ಕರೆ ನೀಡಲಾಗಿದೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಬಂದ್ ನಡೆಸಲಾಗುವುದು. ಬಂದ್ ಕರೆ ಹಿನ್ನೆಲೆಯಲ್ಲಿ ನಾಳೆ ಹೊನ್ನಾಳಿ ಮತ್ತು ನ್ಯಾಮತಿಯಲ್ಲಿ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಬಂದ್ ಗೆ ಸಹಕರಿಸುವಂತೆ ವ್ಯಾಪಾರಿಗಳು, ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
