HomeKarnatakaBREAKING : ಕರ್ನಾಟಕ ಬಂದ್‌ಗೆ ಕರೆ: ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ

BREAKING : ಕರ್ನಾಟಕ ಬಂದ್‌ಗೆ ಕರೆ: ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ

ಬೆಂಗಳೂರು: ಕರ್ನಾಟಕ ಬಂದ್‌’ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ( Vatal Nagaraj) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಿಂದ ಹೊರಗೆ ಬರುತ್ತಿದ್ದ ವೇಳೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಮೆಜೆಸ್ಟಿಕ್ ಗೆ ಪ್ರತಿಭಟನೆ ನಡೆಸಲು ತೆರಳಲು ಸಜ್ಜಾಗಿದ್ದ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಅವರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದರು ಎನ್ನಲಾಗಿದೆ.ಬಾಯಿಗೆ ಟೇಪ್ ಅಂಟಿಸಿಕೊಂಡು ಮೌನವಾಗಿ ಪ್ರತಿಭಟನೆ ನಡೆಸಲು ವಾಟಾಳ್ ನಾಗರಾಜ್ ಸಜ್ಜಾಗಿದ್ದರು. ಸದಾಶಿವನಗರ ಠಾಣೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ,

ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಪ್ರತಿಭಟನೆಗೆ ತೆರಳುತ್ತಿದ್ದ ವಾಟಾಳ್ ನಾಗರಾಜ್ ಅವರನ್ನು ಮನೆಯಿಂದ ಹೊರಬರುತ್ತಿದ್ದಂತೆಯೇ ವಶಕ್ಕೆ ಪಡೆದಿದ್ದಾರೆ.ವಾಟಾಳ್ ನಾಗರಾಜ್ ಅವರ ವಶಕ್ಕೆ ಪಡೆದಿರುವ ಕ್ರಮದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳ ಮುಂದಿನ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್‌ಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಮುಖ ಕನ್ನಡ ಸಂಘಟನೆಗಳು ಹಾಗೂ ಸಾರಿಗೆ ಒಕ್ಕೂಟಗಳು ಬಂದ್‌ಗೆ ಬೆಂಬಲ ನೀಡದ ಹಿನ್ನೆಲೆಯಲ್ಲಿ ವಾಹನ ಸಂಚಾರ ಮತ್ತು ಜನಜೀವನ ಬಹುತೇಕ ಸಹಜವಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular