HomeLatest Newsಫೆ. 24 ರಂದು ಕೊಪ್ಪಳ ಬಂದ್ ಗೆ ಕರೆ

ಫೆ. 24 ರಂದು ಕೊಪ್ಪಳ ಬಂದ್ ಗೆ ಕರೆ

ಕೊಪ್ಪಳ: ಜಿಲ್ಲಾ ಕೇಂದ್ರದ ಸಮೀಪ ಪರಿಸರ ಮಾಲಿನ್ಯಕ್ಕೆ ಕಾರಣವಾಗಿರುವ ಕಾರ್ಖಾನೆಗಳ ನಿಯಂತ್ರಣಕ್ಕೆ ಒತ್ತಾಯಿಸಿ, ಕಾರ್ಖಾನೆಗಳ ವಿಸ್ತರಣೆಗೆ ಅವಕಾಶ ಕೊಡದಂತೆ ಆಗ್ರಹಿಸಿ ಫೆಬ್ರವರಿ 24 ರಂದು ಕೊಪ್ಪಳ ಬಂದ್ ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ, ಪರಿಸರ ಹಿತರಕ್ಷಣಾ ಜಂಟಿ ಕ್ರಿಯಾ ವೇದಿಕೆಯ ಪ್ರಮುಖರು 100 ದಿನಗಳಿಂದ ನಡೆದಿರುವ ಧರಣಿ ಕಾರ್ಯಕ್ರಮದಲ್ಲಿ ಕೊಪ್ಪಳ ಬಂದ್ ಮಾಡುವ ವಿಷಯ ಪ್ರಕಟಿಸಿದ್ದಾರೆ.

ಜಂಟಿ ಕ್ರಿಯಾ ವೇದಿಕೆಯ ಪ್ರಧಾನ ಸಂಚಾಲಕ ಅಲ್ಲಮ ಪ್ರಭು ಬೆಟ್ಟದೂರು ಮಾತನಾಡಿ, 2025ರಲ್ಲಿ ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಕೊಪ್ಪಳ ಬಂದ್ ಮಾಡಲಾಗಿತ್ತು. ಈ ಬಾರಿಯೂ ಬಂದ್ ಮಾಡಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಪ್ಪಳ ಸಮೀಪದ ಗ್ರಾಮಗಳಲ್ಲಿ ಒಂದೇ ಕಡೆ ನೂರಾರು ಕಾರ್ಖಾನೆಗಳು ಕೇಂದ್ರೀಕೃತವಾಗಿರುವುದರಿಂದ ಜನರಿಗೆ ಉತ್ತಮ ಭೂಮಿ, ಗಾಳಿ ಸಿಗದಂತಾಗಿದೆ, ಸರ್ಕಾರ ಜನರ ಸಮಸ್ಯೆ ಬಗೆಹರಿಸಬೇಕು, ಇಲ್ಲವೇ ಜನರೇ ಮುಂದಿನ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಬೇಕು ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular