ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರ ಹೆಸರಲ್ಲಿ ಕಿಡಿಗೇಡಿಯೊಬ್ಬ ಕರೆ ಮಾಡಿದ ಘಟನೆ ನಡೆದಿದೆ.
ಸೆಪ್ಟೆಂಬರ್ 6ರಂದು ರಾಜ್ಯಪಾಲ ಗೆಹ್ಲೋಟ್ ಅವರಿಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೆಸರಲ್ಲಿ ದುಷ್ಕರ್ಮಿ ಕರೆ ಮಾಡಿದ್ದಾನೆ. ಆತನ ಮಾತುಕತೆಯ ಬಗ್ಗೆ ಸಂಶಯಗೊಂಡ ರಾಜ್ಯಪಾಲರು ಕರೆ ಸ್ಥಗಿತಗೊಳಿಸಿದ್ದಾರೆ. ನಂತರ ಕರೆ ಮಾಡಿದ ವಿಚಾರವಾಗಿ ಧರ್ಮೇಂದ್ರ ಪ್ರಧಾನ್ ಅವರನ್ನು ರಾಜ್ಯಪಾಲರು ಸಂಪರ್ಕಿಸಿದಾಗ ಅಪರಿಚಿತ ವ್ಯಕ್ತಿ ಕರೆ ಮಾಡಿರುವುದು ಗೊತ್ತಾಗಿದೆ. ಈ ಬಗ್ಗೆ ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.