HomeKarnatakaಶೌಚಾಲಯದಲ್ಲಿ ವಿಡಿಯೋ ಮಾಡಿ ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ವಿದ್ಯಾರ್ಥಿನಿಯರು ಅಮಾನತು

ಶೌಚಾಲಯದಲ್ಲಿ ವಿಡಿಯೋ ಮಾಡಿ ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ವಿದ್ಯಾರ್ಥಿನಿಯರು ಅಮಾನತು

ಉಡುಪಿ: ಉಡುಪಿಯ ಖಾಸಗಿ ನರ್ಸಿಂಗ್ ಹೋಂ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ್ದಲ್ಲದೇ, ಅದನ್ನು ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ಆರೋಪದ ಮೇಲೆ ಎರಡು ಕೋಮಿನ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ.

ಒಂದು ಕೋಮಿನ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಅದನ್ನ ವಾಟ್ಸಪ್ ಗ್ರೂಪ್ ನಲ್ಲಿ ಶೇರ್ ಮಾಡಿದ್ದಾರೆ ಎನ್ನಲಾಗಿದ್ದು, ಇದು ಗೊತ್ತಾದ ಬಳಿಕ ಮತ್ತೊಂದು ಕೋಮಿನ ವಿದ್ಯಾರ್ಥಿನಿಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನ್ಯಕೋಮಿನ ಅವರ ನಡುವೆ ವಾಗ್ವಾದ ನಡೆದಿದ್ದು, ಆಸ್ಪತ್ರೆಯ ಆಡಳಿತ ಮಂಡಳಿ ಮುಚ್ಚಳಿಕೆ ಬರೆಸಿಕೊಂಡು ಶಿಸ್ತು ಕ್ರಮ ಜರುಗಿಸಿದೆ. ಎರಡು ಕೋಮಿನ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular