HomeKarnatakaಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಯೋಜನೆ ಸಂಬಂಧಿತ ಸಮಸ್ಯೆ ಬಗೆಹರಿಸಲು ಗ್ರಾಪಂ ಕಚೇರಿಗಳಲ್ಲಿ ಕ್ಯಾಂಪ್ ಆಯೋಜನೆ

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಯೋಜನೆ ಸಂಬಂಧಿತ ಸಮಸ್ಯೆ ಬಗೆಹರಿಸಲು ಗ್ರಾಪಂ ಕಚೇರಿಗಳಲ್ಲಿ ಕ್ಯಾಂಪ್ ಆಯೋಜನೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳು ಎದುರಿಸುತ್ತಿರುವ ಸಮಸ್ಯೆಯನ್ನು ನಿವಾರಿಸಲು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿಸೆಂಬರ್ 27ರಿಂದ 29 ರವರೆಗೆ ಕ್ಯಾಂಪ್ ಗಳನ್ನು ಆಯೋಜಿಸಲಾಗುವುದು.

ಸುಮಾರು 2.5 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿಲ್ಲ. ಸುಮಾರು 70,000 ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿರುವುದು ಕಂಡು ಬಂದಿದೆ. ಈ ಫಲಾನುಭವಿಗಳು ಹೊಸ ಬ್ಯಾಂಕ್ ಖಾತೆ ತೆರೆಯಲು ಬಯಸಿದ್ದು, ಅನೇಕ ಫಲಾನುಭವಿಗಳ ನೇರ ನಗದು ವರ್ಗಾವಣೆ ಪ್ರಕ್ರಿಯೆ ಸುಗಮಗೊಳಿಸಲು ಬ್ಯಾಂಕ್ ಖಾತೆಗಳಿಗೆ ಆಧಾರಿ ಜೋಡಣೆ ಮಾಡುವ ಅಗತ್ಯವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಡಿಒ ನೇತೃತ್ವದಲ್ಲಿ ಕ್ಯಾಂಪ್ ಗಳನ್ನು ಆಯೋಜಿಸಲಾಗುವುದು. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದೆ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿತ ಸಮಸ್ಯೆಗಳನ್ನು ಈ ಕ್ಯಾಂಪ್ ಗಳಲ್ಲಿ ಬಗೆಹರಿಸಲಾಗುವುದು.

ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಗಣಕಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತೆಯರು, ಇಡಿಸಿಎಸ್ ತಂಡಗಳು ಕ್ಯಾಂಪ್ ಗಳಲ್ಲಿ ಭಾಗವಹಿಸುವಂತೆ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ. ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಪ್ರತಿನಿಧಿಗಳು, ಇತರೆ ಬ್ಯಾಂಕ್ ಪ್ರತಿನಿಧಿಗಳು ಕೂಡ ಕ್ಯಾಂಪ್ ಗಳಲ್ಲಿ ಭಾಗವಹಿಸಲು ತಿಳಿಸಲಾಗಿದೆ.

ಪ್ರತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಡಿಸೆಂಬರ್ 27ರಿಂದ 29 ರವರೆಗೆ ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಕ್ಯಾಂಪ್ ಗಳನ್ನು ಆಯೋಜಿಸಲಾಗುವುದು.

ಕ್ಯಾಂಪ್ ಗಳಲ್ಲಿ ಫಲಾನುಭವಿಗಳಿಗೆ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಹೊಸ ಬ್ಯಾಂಕ್ ಖಾತೆ ಓಪನ್, ಇ- ಕೆವೈಸಿ ಅಪ್ಡೇಟ್, ಗೃಹಲಕ್ಷ್ಮಿ ಅರ್ಜಿಯ ಸ್ಥಿತಿ ಸೇರಿದಂತೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದೆ ಇತರೆ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular