ಮತಯಾಚನೆ ವೇಳೆ ಕಾರ್ ಡಿಕ್ಕಿ: ಬಿಜೆಪಿ ಕಾರ್ಯಕರ್ತ ಸಾವು

ಮಡಿಕೇರಿ: ಮತಯಾಚನೆ ವೇಳೆ ಕಾರ್ ಡಿಕ್ಕಿಯಾಗಿ ಬಿಜೆಪಿ ಕಾರ್ಯಕರ್ತ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ವಾಲ್ನೂರು ಗ್ರಾಮದಲ್ಲಿ ನಡೆದಿದೆ.

ವಾಲ್ನೂರು ಗ್ರಾಮದ ರಾಮಪ್ಪ(60) ಮೃತಪಟ್ಟವರು. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಕೊಡಗು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಎಸಗಿ ಪರಾರಿಯಾಗಿದ್ದ ಕಾರ್ ಅನ್ನು ಸ್ಥಳೀಯರು ಚಿಕ್ಲಿಹೊಳೆ ಬಳಿ ಪತ್ತೆ ಮಾಡಿದ್ದಾರೆ. ಕಾರು ವಶಕ್ಕೆ ಪಡೆದು ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರು ಮತಯಾಚನೆಗೆ ತೆರಳಿದ್ದ ವೇಳೆ ಕಾರ್ ಹತ್ತಿಸಿದ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಸೇರಿ ಜಿಲ್ಲಾ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read