HomeKarnatakaಶಿವಮೊಗ್ಗದಲ್ಲಿ ಇಂದಿನಿಂದ ಗೀತಾ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರ

ಶಿವಮೊಗ್ಗದಲ್ಲಿ ಇಂದಿನಿಂದ ಗೀತಾ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದಿನಿಂದ ಜಿಲ್ಲೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಜಿಲ್ಲೆಗೆ ಆಗಮಿಸಲಿರುವ ಗೀತಾ ಶಿವರಾಜಕುಮಾರ್ ಮತ್ತು ನಟ ಶಿವರಾಜ್ ಕುಮಾರ್ ಅವರಿಗೆ ಭದ್ರಾವತಿಯ ಬಾರಂದೂರು ಬಳಿ ಸ್ವಾಗತಿಸಲಾಗುವುದು. ನಂತರ ಶಿವಮೊಗ್ಗದ ಎಂ.ಆರ್.ಎಸ್. ವೃತ್ತದ ಬಳಿಯಿಂದ ಬೃಹತ್ ರ್ಯಾಲಿಯಲ್ಲಿ ಲಗನ್ ಮಂದಿರದಲ್ಲಿ ಆಯೋಜಿಸಿರುವ ಸಭೆಗೆ ಕರೆತರಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರ್ಯಾಲಿಯಲ್ಲಿ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ. ಬೆಳಗ್ಗೆ 11.30 ಕ್ಕೆ ಲಗನ ಕಲ್ಯಾಣ ಮಂದಿರದಲ್ಲಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 400ಕ್ಕೂ ಹೆಚ್ಚು ಸಭೆಗಳನ್ನು ನಡೆಸಿ ಭರ್ಜರಿ ಪ್ರಚಾರ ನಡೆಸಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಗೀತಾ ಶಿವರಾಜ್ ಕುಮಾರ್ ಅವರಿಗೆ ಚಿತ್ರರಂಗದಿಂದಲೂ ಬೆಂಬಲ ವ್ಯಕ್ತವಾಗಿದೆ. ಈಗಾಗಲೇ ನಿರ್ಮಾಪಕರ ಸಂಘ ಬೆಂಬಲ ಘೋಷಿಸಿದ್ದು, ಮುಂದಿನ ದಿನಗಳಲ್ಲಿ ಚಿತ್ರರಂಗದ ಕಲಾವಿದರು ಕೂಡ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular